ಬೆಂಗಳೂರು: ಆರ್‌ಎಸ್‌ಎಸ್ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ನಟ ಜಗ್ಗೇಶ್, “ನಾನು ಕಂಡ ಆರ್‌ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ. ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಮಾತೃಹೃದಯಿ ಸಂಸ್ಥೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥಬಿಟ್ಟು ಸಮಾಜಕ್ಕೆ ಹೆಗಲುಕೊಡುವ ಕರ್ಮಯೋಗಿ ಆಗುತ್ತಾನೆ. ದೂರನಿಂತು ಬೆಟ್ಟ ನೋಡುವರಿಗು ಆ ಬೆಟ್ಟ ಏರಿದವರಿಗು ವಿವರಣೆಗೆ ವ್ಯತಾಸವುಂಟು!ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ” ಎಂದು ತಿಳಿಸಿದ್ದಾರೆ.
“ನಾನು ಕಂಡ ಆರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ ಕೊರೋನ ಸಂದರ್ಭವಾಗಲಿ ನೆರೆಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿದ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಮಾತೃಹೃದಯಿ ಸಂಸ್ಥೆ ಎಂದರೆ ಅದು ಒಂದೆ ಆರ್‌ಎಸ್‌ಎಸ್. ಯಾರಿಗೆ ಸಂಘವಿದು. ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿದ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು. ಅವರಿಗೆ ದೇಶವೆ ಮನೆ ದೇಶವಾಸಿಗಳೆ ಬಂಧುಗಳು ಅವರ ನಿಸ್ವಾರ್ಥ ಸಮಾಜಸೇವೆಯೇ ದೇವರ ಪೂಜೆ..ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥಗುಣ ಅರಿಯಿರಿ” ಎಂದಿದ್ದಾರೆ.
RSS ಸಂಘಟನೆ ಇಲ್ಲದೆ ಹೋಗಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು : ಪ್ರಭು ಚವ್ಹಾಣ್ – Vishwanews24
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…