ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಇಂದಿನಿಂದ ಮತ್ತೆ ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮಳೆ  ಜೋರಾಗುವ ಸಾಧ್ಯತೆಯಿದೆ.

ಮುಂದಿನ 5 ದಿನಗಳ ಕಾಲ ಗಾಳಿ, ಗುಡುಗು ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ಕಾರ್ಕಳ : ಪ್ರಥಮ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ – Vishwanews24

ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದರೆ, ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ಉತ್ತರ ಒಳನಾಡಿಗೆ ಇಂದು ಆರೆಂಜ್, ಮುಂದಿನ 4 ದಿನ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಇಂದಿನಿಂದ ಮುಂದಿನ 5 ದಿನ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಬೆಂಗಳೂರಿನಲ್ಲಿ  ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕಾರ್ಕಳ : ಪ್ರಥಮ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ – Vishwanews24

Leave a Reply