ಬೆಂಗಳೂರು : ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ರಾಜ್ಯದ ಜನತೆ ಕಂಗೆಡುತ್ತಿದ್ದಾರೆ. ಇದೀಗಾ ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸೇರಲಿದೆ.
ಇಂದು ಬೆಂಗಳೂರಿನಲ್ಲಿ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ದೊರೆಯಲಿದ್ದು, ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ.
ಈಗಾಗಲೇ, ಭಾರತ್ ಬ್ರ್ಯಾಂಡ್’ ಅಡಿಯಲ್ಲಿ ಗೋಧಿ ಹಿಟ್ಟು ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ ಅಕ್ಕಿಯನ್ನೂ ಸೇರಿಸಲಾಗಿದ್ದು, ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿಪಡಿಸಲಾಗೆದೆ. ಭಾರತ್ ಬ್ರ್ಯಾಂಡ್ ಅಕ್ಕಿಯ 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್ ಗಳು ದೊರೆಯಲಿದೆ.
ಇನ್ನು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇದರ ಜೊತೆಗೆ ರಿಲಯನ್ಸ್, ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಅಷ್ಟೇ ಅಲ್ಲದೆ ಆನ್ಲೈನ್ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…