ನವದೆಹಲಿ : ನೀಟ್ -ಯುಜಿ ಮರು ಪರೀಕ್ಷೆ 2026 ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ಹೇರಿದ್ದ ನಿಷೇಧವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತೆರವುಗೊಳಿಸಿದೆ.
ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ಹಿಂಪಡೆಯಲಾಗಿದ್ದು, ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ‘ಮೆಸೇಜ್-ಎಡಿಟಿಂಗ್’ ಮೇಲಿನ ನಿರ್ಬಂಧವನ್ನು ಜೂನ್ 30 ರವರೆಗೆ ಮುಂದುವರಿಸಲು ಸರ್ಕಾರ ಆದೇಶಿಸಿದೆ.
ಸದ್ಯ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆ್ಯಪ್ ಸ್ಟೋರ್‌ಗಳಲ್ಲಿ ಆ್ಯಪ್ ಇನ್ನು ಲಭ್ಯವಾಗಿಲ್ಲದಿದ್ದರೂ, ಇಂಟರ್ನೆಟ್ ಸೇವಾ ಪೂರೈಕೆದಾರರು ಹಂತಹಂತವಾಗಿ ನಿಷೇಧವನ್ನು ರದ್ದುಗೊಳಿಸುತ್ತಿರುವುದರಿಂದ ಶೀಘ್ರದಲ್ಲೇ ಇದು ದೇಶದ ಬಳಕೆದಾರರಿಗೆ ಪೂರ್ಣ ಪ್ರಮಾಣದಲ್ಲಿ ಲಭ್ಯವಿರಲಿದೆ.
ಇತ್ತೀಚೆಗೆ ನಡೆದ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಸೋರಿಕೆಯಾಗಿ, ಕಾನೂನುಬಾಹಿರವಾಗಿ ಮಾರಾಟವಾಗುತ್ತಿರುವುದು ಪತ್ತೆಯಾಗಿತ್ತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಟೆಲಿಗ್ರಾಮ್ ಪಾತ್ರದ ಕಾರಣದಿಂದ ಸರ್ಕಾರ ಈ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…