ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೆಳಿಗ್ಗೆ 07 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಮಧ್ಯಾಹ್ನ 01 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಉಳಿದ ದಿನಗಳಲ್ಲಿ ಮೇಲಿನ ಆದೇಶ ಅನ್ವಯವಾಗಲಿದೆ. ಅಂಗಡಿ ಮುಂಗಟ್ಟು ಮತ್ತಿತರ ವಾಣಿಜ್ಯ ಚಟುವಟಿಕೆಯ ಉದ್ದೇಶಗಳಿಗೆ/ಕೇಂದ್ರಗಳಿಗೆ 18 ವರ್ಷದೊಳಗಿನವರನ್ನು ಕರೆದೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹೊಟೇಲ್‌ಗಳನ್ನು ಕೂಡ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಹೊಟೇಲ್ ಮತ್ತು ಬಸ್ ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟನ್ನು ಮೀರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…