ಬೆಂಗಳೂರು : ದೇಶಾದ್ಯಂತ ಕೇಂದ್ರದ ನೂತನ ಸಚಿವರು ಇಂದಿನಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.
ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್, ಕಲಬುರಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಭಗವಂತ ಖೂಬಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಯಾತ್ರೆ ಕೈಗೊಳ್ಳಲಿದ್ದಾರೆ.
ಇನ್ನು ಬಹುತೇಕರು ತಮ್ಮ ಕ್ಷೇತ್ರಗಳಿಂದಲೇ ಸೋಮವಾರ ಯಾತ್ರೆ ಆರಂಭಿಸಲಿದ್ದು, ವಿವಿಧ ಊರುಗಳನ್ನು ಸಂಚರಿಸಲಿದ್ದಾರೆ. ದೇವಸ್ಥಾನ ಭೇಟಿ, ಸ್ಥಳೀಯ ಮಟ್ಟದ ಸಭೆಗಳು ಯಾತ್ರೆಯ ಭಾಗವಾಗಿವೆ. ಸ್ಥಳೀಯ ಶಾಸಕರು, ರಾಜ್ಯ ಸರ್ಕಾರದ ಸಚಿವರು ಕೂಡ ಯಾತ್ರೆಯಲ್ಲಿ ಕೇಂದ್ರ ಸಚಿವರಿಗೆ ಸಾಥ್ ನೀಡಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…