ಉಡುಪಿ: ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ಅ.9ರಿಂದ ನವೆಂಬರ್ ತಿಂಗಳ ಕೊನೆಯವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಕಾರ್ಕಳ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಥೀಮ್ ಪಾರ್ಕ್ ಕಳೆದ ಜನವರಿ 27ರಂದು ಉದ್ಘಾಟನೆಗೊಂಡು ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಗೆ ತೆರೆದು ಕೊಂಡಿತ್ತು. ಆದರೆ ಥೀಮ್ ಪಾರ್ಕ್‌ನ ಬಾಕಿ ಉಳಿದ ಕಾಮಗಾರಿಯಲ್ಲಿ ಪರಶುರಾಮ ಮೂರ್ತಿ ಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ ಹಾಗೂ ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಮತ್ತು ಇತರ ಮುಕ್ತಾ ಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆ.23ರವರೆಗೆ ಪ್ರವೇಶವನ್ನು ನಿಷೇಧಿಸಲಾಗಿತ್ತು.
ಇದೀಗ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದವರು ಇನ್ನಷ್ಟು ಕಾಲಾವಕಾಶವನ್ನು ಕೋರಿದ್ದು, ಅದರಂತೆ ಅ.9ರಿಂದ ನವೆಂಬರ್ ಕೊನೆಯವರೆಗೆ ಪರಶುರಾಮ ಥೀಮ್ ಪಾರ್ಕ್‌ಗೆ ಯಾವುದೇ ಸಾರ್ವಜನಿಕರ ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…