ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ -Vishwanews24

Featured, ರಾಷ್ಟ್ರ ನ್ಯೂಸ್

ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ -Vishwanews24

ಶಬರಿಮಲೆ : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳಿಂದ ಬಂದ್​ ಆಗಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.

ಜುಲೈ 21ರವರೆಗೆ ಭಕ್ತರು ಇಲ್ಲಿಗೆ ತೆರಳಬಹುದಾಗಿದೆ ಎಂದು ತಿರುವಾಂಕೂರು ದೇವಸಂ ಮಂಡಳಿ ಈಗಾಗಲೇ (ಟಿಡಿಬಿ) ಮಾಹಿತಿ ಹಂಚಿಕೊಂಡಿದೆ.

ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕೋವಿಡ್​ ವ್ಯಾಕ್ಸಿನ್​ ಪಡೆದುಕೊಂಡಿರುವ ಪ್ರಮಾಣ ಪತ್ರ ಹಾಗೂ ಆರ್​​ಟಿ-ಪಿಸಿಆರ್​​ ನೆಗೆಟಿವ್​ ರಿಪೋರ್ಟ್​ ಕಡ್ಡಾಯವಾಗಿ ಹೊಂದಿರಬೇಕು ಎಂದಿದೆ.

ಪ್ರತಿದಿನ 5 ಸಾವಿರ ಭಕ್ತರ ಭೇಟಿಗೆ ಅವಕಾಶ ಕಲ್ಪಿಸಲಾಗಿದ್ದು, ಆನ್​ಲೈನ್​ ಬುಕ್ಕಿಂಗ್​ಗೆ ಅವಕಾಶ ನೀಡಲಾಗಿದೆ.ಪ್ರಮುಖವಾಗಿ ದೇಗುಲದ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್​ ಬಳಕೆ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ.