ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಈಗಾಗಲೇ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು 2021ರಿಂದಲೇ ಸ್ಥಗಿತಗೊಳಿಸಲಾಗಿತ್ತು. ಆದರೂ, ಹಲವು ಕಂಪನಿಯು ಎಲೆಕ್ಟಿçಕ್ ಬೈಕ್ ಟ್ಯಾಕ್ಸಿಗಳನ್ನು ಓಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಇನ್ನು ನಿನ್ನೆ ಶಾಂತಿನಗರ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ ಹೊರಡಿಸಲಾಗಿದೆ. ಸಂಘಟನೆಗಳ ಒತ್ತಾಯದ ಬಳಿಕ ಇಂದು ಹಾಗೂ ನಾಳೆ ಕಾರ್ಯಾಚರಣೆಗೆ ಇಳಿಯಲಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ವಿರುದ್ಧ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸಲಿದ್ದಾರೆ.
ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಸರ್ಕಾರ ಬ್ಯಾನ್ ಮಾಡುವ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…