Featured

ಇಂದಿನಿಂದ ರಾಜ್ಯಾದ್ಯಂತ ಕೊರೊನಾ ಲಸಿಕಾ ಅಭಿಯಾನ -Vishwanews24

ಇಂದಿನಿಂದ ರಾಜ್ಯಾದ್ಯಂತ ಕೊರೊನಾ ಲಸಿಕಾ ಅಭಿಯಾನ -Vishwanews24

ಯಾರಿಗೆ ಮೊದಲ ಆದ್ಯತೆ?..

ಇಲ್ಲಿದೆ ಮಾಹಿತಿ..

ಬೆಂಗಳೂರು : ಇಂದಿನಿಂದ ರಾಜ್ಯದ್ಯಂತ ಕೋವಿಡ್-19 ವಿಶೇಷ ಲಸಿಕಾ ಮೇಳವನ್ನು ನಡೆಸಲಾಗುತ್ತಿದೆ. ಈ ಮೇಳದಲ್ಲಿ ಆದ್ಯತೆಯ ಮೇರೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕಿ ಅರುಂಧತಿಯವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯಲ್ಲಿ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ಧಿಯ ಉಪಕ್ರಮವಾಗಿ ದಿನಾಂಕ 27-08-2021ರಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ಈ ಕೆಳಕಂಡ ಗುಂಪಿನವರಿಗೆ ಆದ್ಯತೆ ನೀಡುವ ಮುಖಾಂತರ ಈ ಕೋವಿಡ್ ಲಸಿಕಾ ಮೇಳವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.

ಇಂದು ಅದ್ಯತೆ ಮೇಲೆ ಯಾರಿಗೆಲ್ಲಾ ಲಸಿಕೆ ಸಿಗಲಿದೆ.?

• ಇದುವರೆಗೆ ಒಂದು ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ

• 2ನೇ ಡೋಸ್ ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ

• 60 ವರ್ಷ ಮೇಲ್ಪಟ್ಟವರ 1ನೇ ಡೋಸ್ ಹಾಗೂ 2ನೇ ಡೋಸ್ ಕೋವಿಡ್ ಲಸಿಕಾಕರಣ

• ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1 ರಿಂದ 10ನೇ ತರಗತಿ, ಪದವಿ ಪೂರ್ವ ಕಾಲೇಜಿನ ( 11ನೇ ಹಾಗೂ 12ನೇ ತರಗತಿ ಅನ್ವಯಿಸುವಲ್ಲಿ ) ಬೋಧಕ, ಬೋಧಕೇತರ ಸಿಬ್ಬಂದಿಗಳು ಇನ್ನೂ ಕೋವಿಡ್-19 ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕಾಕರಣ

• ಇತರೆ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳ ಕೋವಿಡ್-19 ಲಸಿಕಾಕರಣ

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago