Featured

ಇಂದಿನಿಂದ ರಾಜ್ಯಾದ್ಯಂತ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಅಭಿಯಾನ – Vishwanews24

ಇಂದಿನಿಂದ ರಾಜ್ಯಾದ್ಯಂತ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಅಭಿಯಾನ – Vishwanews24

ಬೆಂಗಳೂರು : ಒಂದೆಡೆ ದೇಶಾದ್ಯಂತ ಒಮಿಕ್ರಾನ್‌ ರೂಪಾಂತರಿ ಸೇರಿದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಿರುವುದು 3ನೇ ಅಲೆಯ ಪ್ರವೇಶದ ಮುನ್ಸೂಚನೆ ನೀಡಿದಂತಿದೆ. ಇನ್ನೊಂದೆಡೆ ಕೋವಿಡ್‌ನಿಂದ ಮಕ್ಕಳಿಗೆ ರಕ್ಷಣೆ ನೀಡುವ ಮಹತ್ವದ ಕ್ರಮದ ಭಾಗವಾಗಿ ಇಂದಿನಿಂದ ಸೋಂಕನ್ನು ಎದುರಿಸುವ ನಿಟ್ಟಿನಲ್ಲಿ ಮಕ್ಕಳಿಗೂ ಲಸಿಕೆ ನೀಡುವ ಸಿದ್ಧತೆ ಆರಂಭಗೊಂಡಿದೆ.

ಇಂದಿನಿಂದ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ನಡೆಯಲಿದೆ. ರಾಜ್ಯ ಮತ್ತು ದೇಶದಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.

ರಾಜ್ಯದಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನದ ಭಾಗವಾಗಿ ಬೆಂಗಳೂರಿನ ಭೈರವೇಶ್ವರ ನಗರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಉಳಿದಂತೆ ಜಿಲ್ಲಾಮಟ್ಟದಲ್ಲಿ ಜಿಲ್ಲಾಉಸ್ತುವಾರಿ ಸಚಿವರು ಮತ್ತು ತಾಲ್ಲೂಕು ಮಟ್ಟದಲ್ಲಿ ಶಾಸಕರು ಅಭಿಯಾನ ಉದ್ಘಾಟಿಸಲಿದ್ದಾರೆ.

ಇಂದು ಅಭಿಯಾನಕ್ಕೆ ಚಾಲನೆ ದೊರಕಿದರೂ, ಜ.4ರ ಮಂಗಳವಾರದಂದು ಮಕ್ಕಳಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ವಿತರಣೆ ಪ್ರಾರಂಭವಾಗುವುದು ಜ.3ರಂದು ಸೋಮವಾರ ನಿಗದಿತ ಸ್ಥಳಗಳಲ್ಲಿ ಮಾತ್ರ ಮಕ್ಕಳಿಗೆ ಲಸಿಕೆ ನೀಡಿ ನಾಳೆಯಿಂದ ಶಾಲಾ-ಕಾಲೇಜುಗಳಲ್ಲಿ ಲಸಿಕೆ ಪೂರ್ಣಪ್ರಮಾಣದಲ್ಲಿ ಲಸಿಕೆ ದೊರಕಲಿದೆ .

ರಾಜ್ಯದಲ್ಲಿ ಒಟ್ಟಾರೆ 31.75 ಲಕ್ಷ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ. ಶಿಕ್ಷಣ ಸಂಸ್ಥೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುತ್ತದೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

12 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

18 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

20 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

20 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

20 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

21 hours ago