ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಭಾರಿ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ.ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3,152 ರೂ. ಆಗಲಿದೆ.
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹ ಬಳಕೆಯ (14.2 ಕೆಜಿ) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಜಾಗತಿಕ ಇಂಧನ ಬೆಲೆಗಳ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.
ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟುಮಾಡಲಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…