ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.
ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ.
ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ ಬಾರಿ ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಈ ಹಿಂದೆಯೇ ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.
ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 14ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…