ನವದೆಹಲಿ : ಇಂದಿನಿಂದ ಸಂಸತ್ತಿನಲ್ಲಿ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಇದೇ ಮೊದಲ ಬಾರಿಗೆ ಎರಡೂ ಸದನಗಳನ್ನೂ ಬಳಸಿಕೊಂಡು ಒಂದು ಸದನ ಕಲಾಪ ನಡೆಸಲಾಗುತ್ತಿದೆ.
ಒಂದು ಕಲಾಪದಿಂದ ಮತ್ತೊಂದು ಕಲಾಪಕ್ಕೆ ಆರು ತಿಂಗಳ ಕಾಲದ ಅಂತರವಿರಬಾರದು ಎಂಬ ನಿಯಮದ ಪ್ರಕಾರವಾಗಿ ಕೊರೊನಾ ನಡುವೆಯೂ ಈ ಕಲಾಪವನ್ನು ನಡೆಸಲಾಗುತ್ತಿದ್ದು ಈ ಅಧಿವೇಶನವೂ ಎಂದಿಗಿಂತ ವಿಭಿನ್ನವಾಗಿ ನಡೆಯಲಿದೆ. ಸಾಮಾಜಿಕ ಅಂತರಕ್ಕೆ ಹೆಚ್ಚಿನ ಆಧ್ಯತೆ ನೀಡುವ ನಿಟ್ಟಿನಲ್ಲಿ ಎರಡು ಪಾಳಿಗಳಲ್ಲಿ ಕಲಾಪ ನಡೆಸಲಾಗುತ್ತಿದೆ.
ಸೋಮವಾರದಿಂದ ಅ. 1ರ ವರೆಗೆ ಕಲಾಪ ನಡೆಯಲಿದ್ದು ಈ ಬಾರಿ ಯಾವುದೇ ವಾರಾಂತ್ಯಗಳೂ, ಸರ್ಕಾರಿ ರಜೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸತತ 18 ದಿನ ಕಲಾಪ ನಡೆಸಲು ಉದ್ದೇಶಿಸಲಾಗಿದೆ. ಬೆಳಿಗ್ಗೆ ರಾಜ್ಯಸಭೆ ಹಾಗೂ ಸಂಜೆ ಲೋಕಸಭೆ ಕಲಾಪಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸದನದಲ್ಲಿ ಬಿಜೆಪಿ ಸರ್ಕಾರವು 45 ಮಸೂದೆಗಳನ್ನು ಮಂಡಿಸಲು ಉದ್ದೇಶಿಸಿದ್ದು, ಈ ಪೈಕಿ ಕೆಲವನ್ನು ಖಡಾಖಂಡಿತವಾಗಿ ವಿರೋಧಿಸಲು ವಿರೋಧ ಪಕ್ಷಗಳು ಸಜ್ಜಾಗಿದೆ. ಹಾಗೆಯೇ ದೇಶದಲ್ಲಿ ಉಂಟಾದ ಕೊರೊನಾ ಬಿಕ್ಕಟ್ಟು, ಆರ್ಥಿಕ ಸಮಸ್ಯೆ, ನಿರುದ್ಯೋಗ ಸಮಸ್ಯೆ, ಜಿಡಿಪಿ ಕುಸಿತ, ಚೀನಾ ಗಡಿ ಬಿಕ್ಕಟ್ಟು, ಬೆಲೆ ಏರಿಕೆ, ಜಿಎಸ್‌ಟಿ ನಷ್ಟ ಪರಿಹಾರ ವಿಚಾರ ಮೊದಲಾದವುಗಳನ್ನು ಮುಂದಿಟ್ಟು ಸರ್ಕಾರವನ್ನು ಪೇಚಿಗೆ ಸಿಲುಕಿಸಲು ಕೂಡಾ ವಿರೋಧ ಪಕ್ಷಗಳು ತಯಾರಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…