ಇಂದಿನಿಂದ 13 ದಿನ ಹಾಸನಾಂಬೆ ಜಾತ್ರೆ: ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ – vishwanews24
ಇಂದಿನಿಂದ 13 ದಿನ ಹಾಸನಾಂಬೆ ಜಾತ್ರೆ: ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ, ಶಕ್ತಿ ಸ್ವರೂಪಿಣಿ ಶ್ರೀ ಹಾಸನಾಂಬ ದೇವಿಯ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ನವೆಂಬರ್ 11ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಹಾಸನ ನಗರ ಸಜ್ಜಾಗಿದ್ದು, ಲಕ್ಷಾಂತರ ಭಕ್ತರ ಆಗಮನ ನಿರೀಕ್ಷಿಸಲಾಗಿದೆ.
ಹಾಸನಾಂಬ ದೇವಾಲಯ ಹಾಗೂ ಸಿದ್ದೇಶ್ವರ ಸ್ವಾಮಿ ದೇವಾಲಯಗಳನ್ನು ಆಕರ್ಷಕವಾಗಿ ಅಲಂಕರಿಸಲಾಗಿದೆ. ದೇವಾಲಯದ ಆವರಣದಲ್ಲಿ ಹೂವಿನ ಅಲಂಕಾರ ಹಾಗೂ ತೆಂಗಿನ ಗರಿಗಳಿಂದ ರೂಪಿಸಲಾದ ಕಲಾಕೃತಿಗಳು ಭಕ್ತರ ಗಮನ ಸೆಳೆಯುತ್ತಿವೆ. ದೇವಾಲಯದ ಮುಂಭಾಗದಲ್ಲಿ ಚಿತ್ತಾಕರ್ಷಕ ಸ್ವಾಗತ ಕಮಾನು ನಿರ್ಮಿಸಲಾಗಿದ್ದು, ನಂದಾದೀಪದ ಪ್ರತಿಕೃತಿಯನ್ನು ಹೂವುಗಳಿಂದ ವಿಶೇಷವಾಗಿ ಸಿಂಗರಿಸಲಾಗಿದೆ.
ಉಡುಪಿ: ಸಿಎಂ ಡಿಕೆಶಿ ಅವರನ್ನು ಭೇಟಿಯಾದ ಆಭರಣ ಎಂಡಿ ಡಾ| ಪ್ರತಾಪ್ ಮಧುಕರ್ ಕಾಮತ್ – vishwanews24
ಹಾಸನಾಂಬೆ ದರ್ಶನೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಂಡಿದೆ. ಭಕ್ತರ ಸರದಿ ನಿರ್ವಹಣೆಗಾಗಿ ಸುಮಾರು 9.5 ಕಿಲೋಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಜನಸಂದಣಿಯನ್ನು ನಿಯಂತ್ರಿಸಲು ಹಾಗೂ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ರೂಪಿಸಲಾಗಿದೆ.
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನ ಪಡೆಯಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ದೇವಿಯ ದರ್ಶನೋತ್ಸವದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ.
ಅಗ್ರಿಗೋಲ್ಡ್ ಸಂತ್ರಸ್ತರ ಬಾಂಡ್ ಪರಿಶೀಲನೆಗೆ ಉಡುಪಿ ಎಸ್ಪಿ ಕಚೇರಿಯಲ್ಲಿ ದಿನ ನಿಗದಿ – vishwanews24
