ನವದೆಹಲಿ: ಪಾಸ್‌ಪೋರ್ಟ್ ಅರ್ಜಿಗಳ ನಿರ್ವಹಣೆ ಮಾಡುವ ಆನ್‌ಲೈನ್ ಪೋರ್ಟಲ್ ತಾಂತ್ರಿಕ ನಿರ್ವಹಣೆ ಕಾರಣ 5 ದಿನಗಳ ಕಾಲ ಸ್ಥಗಿತಗೊಳ್ಳಲಿದೆ ಎಂದು ಪಾಸ್‌ಪೋರ್ಟ್ ಸೇವಾ ಪೋರ್ಟಲ್‌ನ ಅಡ್ವೈಸರಿ ಎಕ್ಸ್ (X) ಖಾತೆಯಲ್ಲಿ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದೆ.
ಆ.29 ಗುರುವಾರ ರಾತ್ರಿ 8 ಗಂಟೆಯಿಂದ ಸೆ.2 ಸೋಮವಾರ ಬೆಳಗ್ಗೆ 6 ಗಂಟಯವರೆಗೆ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ತನ್ನ ಕಾರ್ಯವನ್ನು ಸ್ಥಗಿತಗೊಳಿಸಲಿದೆ. ಈ ಅವಧಿಯಲ್ಲಿ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ಸ್ವೀಕರಿಸುವುದಿಲ್ಲ ಹಾಗೂ ಮೊದಲು ಕಾಯ್ದಿರಿಸಿದ ಎಲ್ಲಾ ಅಪಾಯಿಂಟ್‌ಮೆಂಟ್‌ಗಳನ್ನು ಮರು ನಿಗದಿಪಡಿಸಲಾಗುವುದು ಎಂದು ತಿಳಿಸಿದೆ.
ಈ ಅವಧಿಯಲ್ಲಿ ನಾಗರಿಕರಿಗೂ ಹಾಗೂ ಎಲ್ಲಾ ಎಂಇಎ, ಆರ್‌ಪಿಓ, ಬಿಓಐ, ಐಎಸ್‌ಪಿ, ಡಿಓಪಿ, ಪೊಲೀಸ್ ಅಧಿಕಾರಿಗಳಿಗೆ ಸಿಸ್ಟಮ್‌ಗಳು ಲಭ್ಯವಿರುವುದಿಲ್ಲ. ಆ.30 ರವರೆಗೆ ಬುಕ್ಕಿಂಗ್ ಆಗಿರುವ ಎಲ್ಲಾ ಅಪಾಯಿಂಟ್‌ಮೆಂಟ್‌ಗಳನ್ನು ಮರು ನಿಗದಿಪಡಿಸಲಾಗುವುದು ಎಂದು ಪಾಸ್‌ಪೋರ್ಟ್ ಸೇವಾ ಪೋರ್ಟಲ್ ತಿಳಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಇದೊಂದು ದೈನಂದಿನ ಪ್ರಕ್ರಿಯೆಯಾಗಿದೆ. ಸಾರ್ವಜನಿಕರ ಸೇವೆಗಾಗಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ಮುಂಚಿತವಾಗಿ ಯೋಜಿಸಿಲಾಗಿದೆ ಮತ್ತು ಈ ನಿರ್ವಹಣಾ ಚಟುವಟಿಕೆಯೂ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯನ್ನು ಉಂಟು ಮಾಡುವುದಿಲ್ಲ. ಆದ್ದರಿಂದ ಅಪಾಯಿಂಟ್‌ಗಳ ಮರುನಿಗದಿ ಕಾರ್ಯವು ಯಾವುದೇ ಸವಾಲನ್ನು ಉಂಟು ಮಾಡುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಪಾಸ್‌ಪೋರ್ಟ್ ಸೇವಾ ಪೋರ್ಟಲ್ ದೇಶಾದ್ಯಂತ ಹೊಸ ಪಾಸ್‌ಪೋರ್ಟ್ಗೆ ಅರ್ಜಿ ಸಲ್ಲಿಸಲು ಹಾಗೂ ನವೀಕರಿಸಲು ಅಪಾಯಿಂಟ್‌ಮೆಂಟ್‌ಗಳ ನಿಗದಿಗಾಗಿ ಕಾರ್ಯನಿರ್ವಹಿಸುತ್ತದೆ. ಅಪಾಯಿಂಟ್‌ಮೆಂಟ್ ದಿನದಂದು ಅರ್ಜಿದಾರರು ಪಾಸ್‌ಪೋರ್ಟ್ ಕೇಂದ್ರಗಳಿಗೆ ಹೋಗಿ, ದಾಖಲೆಗಳನ್ನು ಒದಗಿಸಬೇಕು ನಂತರ ಪೊಲೀಸ್ ಪರಿಶೀಲನೆಯ ನಂತರ 30 ರಿಂದ 45 ದಿನಗಳಲ್ಲಿ ಪಾಸ್‌ಪೋರ್ಟ್ ಅರ್ಜಿದಾರರರ ವಿಳಾಸಕ್ಕೆ ತಲುಪುತ್ತದೆ ಎಂದು ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…