Featured

ಇಂದಿನ ದಿನ ಭವಿಷ್ಯ : 13-10-2021 -Vishwanews24

ಇಂದಿನ ದಿನ ಭವಿಷ್ಯ : 13-10-2021 -Vishwanews24

ಮೇಷ : ಇಂದು ಕಚೇರಿಯಲ್ಲಿ ಒಳ್ಳೆಯ ವಾತಾವರಣ ಇರಲಿದೆ. ನೀವು ಚಟುವಟಿಕೆಯಿಂದ ಇರಲಿದ್ದೀರಿ. ನಿಮ್ಮೆಲ್ಲ ಕೆಲಸಗಳಿಗೆ ಸಂಗಾತಿಯು ಸಾಥ್​ ನೀಡಲಿದ್ದಾರೆ.

ವೃಷಭ : ಮಕ್ಕಳ ಓದಿನತ್ತ ಹೆಚ್ಚಿನ ಗಮನ ನೀಡಲೇಬೇಕು. ಇಲ್ಲವಾದಲ್ಲಿ ಮಕ್ಕಳು ತುಂಬಾ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ. ದಾಂಪತ್ಯ ಜೀವನವು ಚೆನ್ನಾಗಿ ಇರಲಿದೆ.

ಮಿಥುನ : ಮಕ್ಕಳ ಒತ್ತಾಯಕ್ಕೆ ಮಣಿದು ಹೊಸ ವಾಹನ ಖರೀದಿ ಮಾಡಲಿದ್ದೀರಿ. ಸಂಗಾತಿಯ ಆರೋಗ್ಯ ಸಂಜೆಯ ಬಳಿಕ ಹದಗೆಡಲಿದೆ. ಇದರಿಂದ ನೀವು ಆತಂಕಕ್ಕೆ ಒಳಗಾಗುವಿರಿ.

ಕಟಕ : ನಿಮ್ಮ ಉತ್ತಮ ಬುದ್ಧಿಯಿಂದಾಗಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಇಂದು ನಿಮಗೆ ಕುಟುಂಬದಿಂದ ಒಳ್ಳೆಯ ಸುದ್ದಿ ಕೇಳಿ ಬರಲಿದೆ.

ಸಿಂಹ : ಕೃಷಿ ಚಟುವಟಿಕೆಗಳಲ್ಲಿ ಇರುವವರಿಗೆ ಇಂದು ತುಸು ಹೆಚ್ಚೇ ಖರ್ಚಾಗಬಹುದು. ಜವಳಿ ಉದ್ಯಮಿಗಳಿಗೆ ಉತ್ತಮ ಹಣಕಾಸಿನ ಲಾಭವಿದೆ. ಖಾಸಗಿ ಉದ್ಯೋಗಿಗಳಿಗೆ ಬಡ್ತಿ ಭಾಗ್ಯವಿದೆ.

ಕನ್ಯಾ : ಮಾತು ಬೆಳ್ಳಿ, ಮೌನ ಬಂಗಾರ ಎಂಬ ಮಾತಿದೆ. ಹೀಗಾಗಿ ಆದಷ್ಟು ಮೌನವಾಗಿ ಇದ್ದಷ್ಟು ಪರಿಸ್ಥಿತಿ ನಿಮ್ಮ ಪರವಾಗಿ ಇರಲಿದೆ. ವ್ಯಾಪಾರಿಗಳಿಗೆ ಇಂದು ಲಾಭವಿದೆ. ಪೋಷಕರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ತುಲಾ : ವೃತ್ತಿರಂಗದಲ್ಲಿ ನಿಮಗೆ ಯಶಸ್ಸಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಅವಕಾಶ ಹುಡುಕಿಕೊಂಡು ಬರಲಿದೆ. ವೈದ್ಯಕೀಯ ರಂಗದಲ್ಲಿ ಇರುವವರಿಗೆ ಇಂದು ಒತ್ತಡದ ದಿನವಾಗಿರಲಿದೆ.

ವೃಶ್ಚಿಕ : ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ಸ್ಥಾನ ಮಾನ ಸಿಗಲಿದೆ. ತಾಯಿಯ ಕಟುವಾದ ನುಡಿಯು ನಿಮ್ಮ ಮನಸ್ಸಿಗೆ ಘಾಸಿ ಉಂಟು ಮಾಡುವ ಸಾಧ್ಯತೆ ಇದೆ.

ಧನು : ಹೊಸ ಕಚೇರಿಯ ವಾತಾವರಣಕ್ಕೆ ಹೊಂದಿಕೊಳ್ಳಲಿದ್ದೀರಿ. ಇಂದು ನಿಮಗೆ ಪ್ರಯಾಣ ಶುಭಕರವಾಗಿಲ್ಲ. ಹೀಗಾಗಿ ಆದಷ್ಟು ವಾಹನಗಳಿಂದ ದೂರವೇ ಇರಿ.

ಮಕರ : ಮಕ್ಕಳು ಓದಿನೆಡೆಗೆ ಹೆಚ್ಚಿನ ಆಸಕ್ತಿ ತೋರಲಿದ್ದಾರೆ. ಇದರಿಂದ ನೀವು ನಿರಾಳತೆ ಅನುಭವಿಸುವಿರಿ. ಇಂದು ನೀವು ಸಂಗಾತಿಯ ಜೊತೆ ಹೆಚ್ಚಿನ ಸಮಯ ಕಳೆಯಲಿದ್ದೀರಿ.

ಕುಂಭ : ಇಂದು ನಿಮ್ಮ ಅದೃಷ್ಟ ಖುಲಾಯಿಸಲಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ಇಂದು ಪೂರ್ಣಗೊಳ್ಳಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಬೆಲೆಯನ್ನು ಪಡೆಯಲಿದ್ದೀರಿ.

ಮೀನ : ದಾಂಪತ್ಯ ಜೀವನದಲ್ಲಿ ಕಿರಿಕಿರಿ ಉಂಟಾಗಲಿದೆ. ಸಂಗಾತಿಯ ಮೇಲೆ ಅನುಮಾನ ಪಡುವುದು ಸೂಕ್ತವಲ್ಲ. ಎಲ್ಲರೊಂದಿಗೆ ಸ್ನೇಹ ಸಂಪಾದಿಸುವಲ್ಲಿ ಯಶಸ್ವಿಯಾಗುವಿರಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago