Categories: ಉಡುಪಿ

ಇಂದಿನ ಫಲಿತಾಂಶ ಮೋದಿಗೆ ಸೋಲಿನ ಸೂಚನೆ ಎಂದ ಖರ್ಗೆ,

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿರುವುದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಜನ ಎಷ್ಟು ಬೇಸತ್ತಿದ್ದಾರೆ ಎನ್ನುವ ಸೂಚನೆ ಎಂದು ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉಗ್ರಪ್ಪ ಜಯವನ್ನು ಬಣ್ಣಿಸಿದ್ದಾರೆ.

ಉಪ ಚುನಾವಣಾ ಫಲಿತಾಂಶಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಉಪ ಚುನಾವಣೆಗಳು ಪ್ರಧಾನಿ ಮೋದಿ ಆಡಳಿತದ ವಿರುದ್ಧದ ಸೂಚನೆಯಾಗಿದೆ. ಬಳ್ಳಾರಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಕಾಂಗ್ರೆಸ್ಸಿನ ಅಭ್ಯರ್ಥಿ ವಿ.ಎಸ್.ಉಗ್ರಪ್ಪನವರು ಭಾರೀ ಅಂತರದಿಂದ ಗೆದ್ದಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಅಚ್ಚರಿ ಇಲ್ಲ. ಏಕೆಂದರೆ ನಮಗೆ ಮೊದಲೇ ನಿರೀಕ್ಷೆ ಇತ್ತು ಹಾಗೆ ಆಗಿದೆ ಎಂದು ಹೇಳಿದ್ರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ನವೆಂಬರ್ 6ಕ್ಕೆ ಅಸ್ಥಿರಗೊಳಿಸುತ್ತೇವೆ ಎಂದು ಮುಹೂರ್ತ ಇಟ್ಟಿದ್ದರು. ಆದರೆ ಅವರಿಗೆ ವಾಸ್ತವದ ಸ್ಥಿತಿ ಗೊತ್ತಿಲ್ಲ. ಅದಕ್ಕೆ ಆ ರೀತಿ ಮಾತನಾಡುತ್ತಿದ್ದರು. ಅವರಿಗೆ ಮಾತನಾಡುವ ಚಟ ಹೆಚ್ಚಾಗಿದೆ ಎಂದು ವ್ಯಂಗ್ಯವಾಡಿದರು.

ಶಿವಮೊಗ್ಗದಲ್ಲೂ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ಗೆಲ್ಲುತ್ತಾರೆಂದು ವಿಶ್ವಾಸ ಇತ್ತು. ಆದರೂ ಸಹ ಬಿಜೆಪಿಯವರು ಬಹಳ ಅಂತರದಿಂದ ಗೆಲುವು ಸಾಧಿಸಿಲ್ಲ. ರಾಜ್ಯದಲ್ಲಿನ ಉಪ ಚುನಾವಣೆಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಸೋಲಿಗೆ ಸೂಚನೆ. ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಗೆಲುವು ಸಾಧಿಸುತ್ತದೆ ಎನ್ನುವುದನ್ನು ಇದು ತೋರಿಸಿದೆ ಎಂದು ತಿಳಿಸಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago