ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರ ಕುಂದಾಪುರ ಇಂದು ಬೆಳಿಗ್ಗೆ ಇದು ಇಂದಿರಾ ಕ್ಯಾಂಟೀನ್ ಬಿಲ್ ಪೆಂಡಿಂಗ್ ಇದೇ ಅದಕ್ಕೋಸ್ಕರ ಈ ಷಡ್ಯಂತರ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಬಾಬು ಪೂಜಾರಿಯವರು,ಇಂದಿರಾ ಕ್ಯಾಂಟೀನ್ಗು ಇವರಿಗೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಅದು ನನ್ನ ಬಿಜಿನೆಸ್ ಇದು ನನಗೆ ಆಗಿರುವ ವಂಚನೆ ಎಂದು ಬೆಂಗಳೂರಿನ ಸಿಸಿಬಿ ಕಚೇರಿ ಬಳಿ ಉದ್ಯಮಿ ಗೋವಿಂದಬಾಬು ಪೂಜಾರಿ ಹೇಳಿಕೆ ನೀಡಿದರು.
ಸಿಸಿಬಿ ಅಧಿಕಾರಿಗಳು ಕರೆದಿದ್ದಕ್ಕೆ ವಿಚಾರಣೆಗೆ ಆಗಮಿಸಿದ್ದೇನೆ. ದೂರಿನಲ್ಲಿ ಯಾರೆಲ್ಲಾ ಇದ್ದಾರೋ ಅವರನ್ನೆಲ್ಲ ಭೇಟಿಯಾಗಿದ್ದೇನೆ. ಸಿಸಿಬಿ ಅಧಿಕಾರಿಗಳ ವಿಚಾರಣೆ ಮುಗಿಸಿಕೊಂಡು ಮತ್ತೆ ಮಾತನಾಡುತ್ತೇನೆ ಎಂದು ವಿಚಾರಣೆಗೆ ಮುನ್ನ ಉದ್ಯಮಿ ಗೋವಿಂದ ಪೂಜಾರಿ ಹೇಳಿಕೆ ನೀಡಿದರು.
ಮತ್ತೆ ಸಿಸಿಬಿ ಕಚೇರಿಗೆ ಕರೆತಂದ ಅಧಿಕಾರಿಗಳು
ಉದ್ಯಮಿ ಒಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಸುಮಾರು ಐದು ಕೋಟಿಗೂ ಹೆಚ್ಚು ವಂಚನೆ ಮಾಡಿರೋ ಪ್ರಕರಣದಲ್ಲಿ ಹಿಂದೂ ಸಂಘಟನೆಯ ಪ್ರಮುಖ ನಾಯಕಿ ಚೈತ್ರ ಕುಂದಾಪುರನ್ನು ಇಂದು ವೈದ್ಯಕೀಯ ತಪಾಸಣೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ಸಿಸಿಬಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚೈತ್ರಾಗೆ ವೈದ್ಯಕೀಯ ತಪಾಸಣೆ ಅಂತ್ಯಗೊಂಡಿದ್ದು ಮತ್ತೆ ಸಿಸಿಬಿ ಕಚೇರಿಗೆ ಚೈತ್ರಳನ್ನು ಸಿಸಿಬಿ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಿಸಿಬಿ ಕಚೇರಿ ಇದ್ದು ತಪಾಸಣೆ ನಂತರ ಪುನಹ ಕರೆ ತಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…