ಮಂಗಳೂರು: ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ರೀತಿಯ ಕೆಡುಕಾಗಿಲ್ಲ, ಬದಲಾಗಿ ಆ ಕಾಲದಲ್ಲಿ ಹಲವಾರು ಪ್ರಗತಿಪರ ಯೋಜನೆ ಜಾರಿಗೆ ಬಂದವು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಕಾಲದಲ್ಲಿ ಭೂ ಮಸೂಧೆ ಕಾಯ್ದೆ, ಬ್ಯಾಂಕ್ ರಾಷ್ಟ್ರೀಕರಣ, ಖುಣ ಪರಿಹಾರ ಕಾಯ್ದೆ, ಬಸ್ ರಾಷ್ಟ್ರೀಕರಣ ಸಹಿತ ಹಲವಾರು ಯೋಜನೆ ಅನುಷ್ಠಾನಕ್ಕೆ ತರಲಾಯಿತು. ಆದರೆ ದೇಶಕ್ಕಾಗಿ ಪ್ರಾಣತೆತ್ತ ಇಂದಿರಾ ಗಾಂಧಿ ಅವರ ಹಸೆರಿಗೆ ಕಳಂಕ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.
ಹಿಂಸೆಗೆ ಹಿಂದೂ ಧರ್ಮದಲ್ಲಿಅವಕಾಶ ಇಲ್ಲ ಎಂದು ಸಂಸತ್ತಿನಲ್ಲಿ ಹೇಳಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಬಗ್ಗೆಯೂ ಬಿಜೆಪಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದರು.
ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಮೇಯರ್ ಶಶಿದರ್ ಹೆಗ್ಡೆ, ಸುರೇಂದ್ರ ಕಂಬಳಿ, ಬೇಬಿ ಕುಂದರ್, ಪಿಯೂಸು ರೋಡ್ರಿಗಾಸ್, ನವೀನ್ ಡಿ ಸೋಜಾ, ಅಪ್ಪಿ, ಜಯಶೀಲಾ ಅಡ್ಯಾಂತಯ, ಯೋಗೀಶ್ ನಾಯಕ್, ನಿತ್ಯಾನಂದ ಶೆಟ್ಟಿ, ನೀತ್ ಶರಣ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…