Featured

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ ಸಂದರ್ಭದಲ್ಲಿ ವೈಭವವನ್ನು ಕಾಣಲಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಡುಪಿ ಜಿಲ್ಲೆಗೆ ಇಂದು ಸಂಜೆ 4:40ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಆಯೋಜಿಸಿರುವ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಸಿಎಂ ಅವರು ಉಚ್ಚಿಲ ಮಹಾಲಕ್ಷ್ಮಿ ದೇವರ ದರ್ಶನ ಪಡೆದು, ಮೊಗವೀರ ಕುಲ ಗುರು ಮಾಧವ ಮಂಗಲ ಅವರ ಕಂಚಿನ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ‌ ನಂತರ ವೇದಿಕೆ ಕಾರ್ಯಕ್ರಮಕ್ಕೆ ಭಾಗವಹಿಸಿ ಸನ್ಮಾನ ಸ್ವೀಕರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಗೌರವ ಸಲಹೆಗಾರ ನಾಡೋಜ ಡಾ. ಜಿ.ಶಂಕರ್ ಮೀನುಗಾರರ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಮುಂದಿಡಲಿದ್ದಾರೆ. ತುಳು ಭಾಷೆಗೆ ರಾಜ್ಯದ ಎರಡನೇ ಆಡಳಿತ ಭಾಷೆಯ ಸ್ಥಾನಮಾನ ಕಲ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರನ್ನು ಅಭಿನಂದನ ಸಮಾರಂಭವೂ ನಡೆಯಲಿದೆ.

ಉಚ್ಚಿಲ ನವರಾತ್ರಿಯು ಉಡುಪಿ ಜಿಲ್ಲೆಯ ಜನರಿಗೆ ಸಂಭ್ರಮ ದುಪ್ಪಟ್ಟು ಮಾಡಿದೆ. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ಮೊಗವೀರ ಮುಖಂಡ ಹಾಗೂ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ.ಶಂಕರ್ ನೇತೃತ್ವದಲ್ಲಿ ಐದು ವರ್ಷಗಳ ಹಿಂದೆ ನವರಾತ್ರಿ ಹಿನ್ನೆಲೆಯಲ್ಲಿ ದಸರಾ ಆಚರಣೆ ಶುರುವಾದ ದಿನದಿಂದ ಉಚ್ಚಿಲ ಕ್ಷೇತ್ರವಾಗಿ ಮಾರ್ಪಟ್ಟಿತ್ತು. ನಾಲ್ಕು ವರ್ಷ ದಸರಾ ಆಯೋಜನೆ ಯಶಸ್ವಿಯಾಗಿ ನಡೆದು ಈಗ ಐದನೇ ವರ್ಷಕ್ಕೆ ಕಾಲಿಟ್ಟಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

30 minutes ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

40 minutes ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

49 minutes ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 hour ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 hour ago

ಉಡುಪಿ:  ಅ. 17 ರಂದು ನೇರ ಸಂದರ್ಶನ – vishwanews24

 ಉಡುಪಿ:  ಅ. 17 ರಂದು ನೇರ ಸಂದರ್ಶನ  ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…

1 hour ago