ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಇಂದು ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ.
ಇಂದು ಬೆಳಗ್ಗೆ 9.37ರ ಮೀನ ಲಗ್ನ ಸುಮುಹೂರ್ತದಲ್ಲಿ ಪ್ರಧಾನ ಸ್ವರ್ಣಕಲಶ ಹಾಗೂ 1,127 ಬೆಳ್ಳಿ ಕಲಶಗಳಿಂದ ಶ್ರೀದೇವಿಗೆ ಅಭಿಷೇಕ ನಡೆಯಲಿದೆ. ಕಲಶಮಂಡಲ ಪೂಜೆಯ ವೇಳೆ ಪ್ರಧಾನ ಸ್ವರ್ಣ ಕಲಶವನ್ನು ಮಂಡಲ ಮಧ್ಯೆ ಪ್ರತಿಷ್ಠಾಪಿಸಲಾಗುತ್ತದೆ. 27 ದೊಡ್ಡ ಗಾತ್ರದ ಬೆಳ್ಳಿಯ ಖಂಡ ಕಲಶಗಳು ಹಾಗೂ 1100 ಬೆಳ್ಳಿಯ ಸಣ್ಣ ಕಲಶಗಳನ್ನು ಮಂಡಲದಲ್ಲಿ ಇರಿಸಿ ಪೂಜಿಸಿ ಬಳಿಕ ದೇವಿಗೆ ಅಭಿಷೇಕ ಮಾಡಲಾಗುತ್ತದೆ.
ಸೋಮವಾರದಂದು ಕಟೀಲು ದೇವರಿಗೆ ಅಷ್ಟಬಂಧ ನಡೆದು, ಸಾನ್ನಿಧ್ಯ ಕಲಶಾಭಿಷೇಕ, ಚಿನ್ನದ ರಥೋತ್ಸವ ಸಂಪನ್ನಗೊಂಡಿದೆ. ಬ್ರಹ್ಮಕಲಶೋತ್ಸವ ಸಂದರ್ಭ ನಡೆಯುವ ಮೂರು ಪ್ರಮುಖ ಧಾರ್ಮಿಕ ವಿಧಿಗಳಾದ ಫೆ.1ರ ನಾಗಮಂಡಲೋತ್ಸವ, ಫೆ.2ರ ಕೋಟಿ ಜಪಯಜ್ಞ ಸಮಾಪ್ತಿ ಹಾಗೂ ಫೆ.3ರಂದು ಹತ್ತು ಮಹಾಕುಂಡಗಳಲ್ಲಿ ಸಹಸ್ರ ಚಂಡಿಕಾಯಾಗಗಳು ಭ್ರಾಮರೀ ವನದಲ್ಲಿಯೇ ನಡೆಯಲಿದೆ. ಹತ್ತು ಮಹಾಕುಂಡಗಳಲ್ಲಿ ನಡೆಯಲಿರುವ ಸಹಸ್ರ ಚಂಡಿಕಾಯಾಗಕ್ಕೆ ಸಿದ್ಧತೆ ನಡೆಯುತ್ತಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…