Featured

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ – vishwanews24

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ವಿಜಯ್ ಅವರ ಇದು ಮೊದಲ ಕರ್ನಾಟಕ ಪ್ರವಾಸವಾಗಿದ್ದು, ಮಧ್ಯಾಹ್ನ 3 ಗಂಟೆಗೆ ಕೊಲ್ಲೂರಿಗೆ ಆಗಮಿಸುವ ನಿರೀಕ್ಷೆಯಿದೆ.

ವಿಜಯ್ ಅವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅರ್ಚಕ ವೃಂದ ಹಾಗೂ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದೆ. ಸರ್ಕಾರದ ಪ್ರೋಟೋಕಾಲ್ ಪ್ರಕಾರ ಸಿಎಂ ವಿಜಯ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಗೌರವಪೂರ್ವಕವಾಗಿ ದೇವಳದೊಳಗೆ ಕರೆದುಕೊಂಡು ಹೋಗಲಾಗುತ್ತದೆ ಎಂದು ದೇವಸ್ಥಾನದ ಅರ್ಚಕ ನಿತ್ಯಾನಂದ ಅಡಿಗ ತಿಳಿಸಿದ್ದಾರೆ.

ಇದನ್ನೂ ಓದಿ: 

ತಮಿಳುನಾಡಿನಿಂದ ಅನೇಕ ಗಣ್ಯರು ಹಾಗೂ ಕಲಾವಿದರು ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡುವುದು ಸಾಮಾನ್ಯ. ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಸೇರಿದಂತೆ ಹಲವು ಗಣ್ಯರು ಈ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲದೆ, ಎಂ. ಕೆ. ಸ್ಟಾಲಿನ್ ಅವರ ಕುಟುಂಬ ಸದಸ್ಯರು ಸಹ ದೇವಿಯ ದರ್ಶನ ಪಡೆದಿದ್ದರು ಎಂದು ಅವರು ತಿಳಿಸಿದ್ದಾರೆ.

ವಿಜಯ್ ಅವರ ಕುಟುಂಬದವರು ಈ ಹಿಂದೆ ಹಲವು ಬಾರಿ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ್ದರೂ, ಮುಖ್ಯಮಂತ್ರಿ ಆದ ಬಳಿಕ ಅವರು ಮೊದಲ ಬಾರಿಗೆ ದೇವಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ.

ದೇವಸ್ಥಾನದಲ್ಲಿ ವಿಜಯ್ ಅವರಿಗಾಗಿ ಯಾವುದೇ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿಲ್ಲ. ಸಾಮಾನ್ಯ ಭಕ್ತರಂತೆ ಅವರು ದೇವಿಯ ದರ್ಶನ ಪಡೆಯಲಿದ್ದು, ದೇವಸ್ಥಾನದ ಸಂಪ್ರದಾಯದಂತೆ ಯಾವುದೇ ವಿಶೇಷ ಆರಾಧನೆ ನಡೆಯುವುದಿಲ್ಲ ಎಂದು ಅರ್ಚಕರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 

ಇಂದು ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸಂಜೆ ಪ್ರದೋಷ ಕಾಲಕ್ಕೂ ಮುನ್ನ ನಡೆಯುವ ಉತ್ಸವ ಹಾಗೂ ಪೂಜಾ ಕಾರ್ಯಕ್ರಮಗಳು ಎಂದಿನಂತೆ ಜರುಗಲಿವೆ. ಇದು ಸಿಎಂ ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವಲ್ಲ ಎಂದು ದೇವಸ್ಥಾನ ಆಡಳಿತ ತಿಳಿಸಿದೆ.

ಅಲ್ಲದೆ, ವಿಜಯ್ ಅವರು ಮಂಗಳಾರತಿ ನಡೆಯುವ ಸಮಯದಲ್ಲಿ ದೇವಸ್ಥಾನಕ್ಕೆ ಆಗಮಿಸಿದರೆ, ಮಂಗಳಾರತಿಯನ್ನು ವೀಕ್ಷಿಸುವ ಅವಕಾಶ ದೊರೆಯಲಿದೆ. ದೇವಿಯ ಮೇಲಿನ ಭಕ್ತಿಯಿಂದ ವಿವಿಧ ರಾಜ್ಯಗಳ ಸಾವಿರಾರು ಭಕ್ತರು ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಎಂದು ನಿತ್ಯಾನಂದ ಅಡಿಗ ಹೇಳಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

49 minutes ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

1 hour ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

1 hour ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

2 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

3 hours ago