ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿಗೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಇಂದು ಆಗಸ್ಟ್ 12ರಂದು ಮಂಗಳೂರಿಗೆ ಭೇಟಿ ನೀಡಲಿರುವರು.

ಆಗಸ್ಟ್ 12 ರಂದು ಬೆಳಿಗ್ಗೆ 10.30 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಆಗಮಿಸಿ, ಮಂಗಳೂರು ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಎಸ್.ಡಿ.ಆರ್.ಎಫ್., ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ ದಳದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವರು.

ಮಧ್ಯಾಹ್ನ 1.40 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

ಈಗಾಗಲೇ ಮಂಗಳವಾರ ಉಡುಪಿ ಜಿಲ್ಲೆಗೆ ಆಗಮಿಸಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಕುಂದಾಪುರ ಮತ್ತು ಬೈಂದೂರು ಭಾಗದಲ್ಲಿ ಸಂಭವಿಸಿರುವ ಕಡಲಕೊರೆತ ಪ್ರದೇಶಗಳನ್ನು ಮಂಗಳವಾರ ಸಂಜೆ ವೀಕ್ಷಿಸಿದರು.