ಬೆಂಗಳೂರು : ಇಂದು ನಾನು ಸ್ಪೀಕರ್ ಕಚೇರಿಯಲ್ಲೇ ಇರುತ್ತೇನೆ. ಇಂದು ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ. ಯಾರು ಬಂದು ಬೇಕಾದರೂ ರಾಜೀನಾಮೆ ಕೊಡಲಿ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನನ್ನ ಸ್ಥಾನದಲ್ಲಿ ನಾನು ಹೇಗೆ ವರ್ತಿಸಬೇಕು. ಜನರು ಏನು ನಿರೀಕ್ಷೆ ಮಾಡುತ್ತಾರೆ. ಸಂವಿಧಾನ ಏನು ನಿರೀಕ್ಷೆ ಮಾಡುತ್ತೆ ಇಷ್ಟಕ್ಕೆ ನಾನು ಸೀಮಿತವಾಗಿರುತ್ತೇನೆ. ಸದ್ಯಕ್ಕೆ ಯಾವ ಶಾಸಕರು ಸಮಯ ಕೇಳಿಲ್ಲ. ಜನರ ಭಾವನೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡುತ್ತೇನೆ ಎಂದರು.
ಜನರಿಗೆ ವೋಟು ಹಾಕುವ ಹಕ್ಕು ಕೊಟ್ಟಿದ್ದೇವೆ. ಆದ್ದರಿಂದ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ ಎಂದರೆ ಸಾಕಪ್ಪ ನಿಮ್ಮ ಕೆಲಸ ಎಂದು ಹೇಳುತ್ತಾರೆ. ಶಾಸಕರ ರಾಜೀನಾಮೆಯಿಂದ ನನಗೆ ಬೇಸರವಾಗುವುದಿಲ್ಲ. ಕೊಳಚೆ ಪ್ರದೇಶದಲ್ಲಿ ವಾಸ ಮಾಡುವವರಿಗೆ ಇಲ್ಲಿ ದುರ್ವಾಸನೆ ಇದೆ ಎಂದರೆ ಹೇಗಾಗುತ್ತದೆ. ನಾನಿರುವುದೇ ಸ್ಲಂನಲ್ಲಿ ಹೀಗಾಗಿ ಸ್ಲಂನಲ್ಲಿ ಇದ್ದುಕೊಂಡು ಸುಗಂಧ ಪರಿಮಳ ಬರಬೇಕು ಎಂದರೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…