ಬೆಂಗಳೂರು : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾಗಿರುವ ನಮ್ಮ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ₹50,00,000 (ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ.
ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಸೋಮವಾರ ರಾತ್ರಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…