Featured

ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ : ಡಿ.ವಿ. ಸದಾನಂದ ಗೌಡ – vishwanews24

ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು..

ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ..

ಕಡಬ : ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾದೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಿದ ಅಂದಿನ ರಾಜ್ಯ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸದಾನಂದ ಗೌಡ, ನಾನು ಚುನಾವಣೆ ರಾಜಕೀಯ ದಿಂದ ನಿವೃತ್ತನಾಗಿದ್ದು, ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ ಆದ್ದರಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ ಎಂದರು.

ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ ಹರಕು ನಾಲಗೆ, ಚೀಲ ತುಂಬಾ ದುಡ್ಡು ಮತ್ತು ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

14 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago