ಬೆಂಗಳೂರು: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆಯಲ್ಲಿ ಕಳೇಬರ ಸಿಗದ ಬೆನ್ನಲ್ಲೆ ದೇಗುಲಕ್ಕೆ ಅಪಪ್ರಚಾರ ಎಸಗಲಾಗುತ್ತಿದೆ ಅಂತಾ ದೇಗುಲದ ಭಕ್ತರ ಆಕ್ರೋಶ ಹೆಚ್ಚಾಗಿದೆ. ಮತ್ತೊಂದು ಕಡೆ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ರೆ ಇನ್ನೊಂದು ಕಡೆ ಹಿಂದೂ ಸಂಘಟನೆಗಳು ಬೆಂಗಳೂರಿನಲ್ಲಿ ಹೋರಾಟಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ.
ಈ ನಡುವೆ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಇಂದು (ಆ.16) ಧರ್ಮಸ್ಥಳಕ್ಕೆ 500 ಕಾರುಗಳಲ್ಲಿ ಬಿಜೆಪಿ ಕಾರ್ಯಕರ್ತರು ಹೊರಡಲಿದ್ದಾರೆ. ಈಗಾಗಲೇ ಕಾರುಗಳು ಜಮಾವಣೆಗೊಂಡಿದ್ದು, ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್‌ಗೇಟ್‌ನಿಂದ ಯಾತ್ರೆ ಹೊರಡಲಿವೆ.
ಯಲಹಂಕದಿಂದ ಕಾರ್ಯಕರ್ತರು ಹೊರಡಲಿದ್ದಾರೆ. ನೂರಾರು ಜನ ಭಗವಾಧ್ವಜ ಹಿಡಿದು ಕೇಸರಿ ಶಾಲು ಧರಿಸಿ, ಧರ್ಮಸ್ಥಳಕ್ಕೆ ಹೊರಡಲಿದ್ದಾರೆ. ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ ಸುಮಾರು 3 ಗಂಟೆಗೆ ವಿಶ್ವನಾಥ್ ತಂಡ ಧರ್ಮಸ್ಥಳ ತಲುಪಲಿದೆ. ದೇವರ ದರ್ಶನ ಪಡೆದು ಧರ್ಮಸ್ಥಳದಲ್ಲೇ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗವೂ ಭಾನುವಾರ (ಆ.17) ಧರ್ಮಸ್ಥಳಕ್ಕೆ ಭೇಟಿ ಮಾಡಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ನಿಯೋಗದಲ್ಲಿರಲಿದ್ದಾರೆ. ಬಿಜೆಪಿ ನಾಯಕರು ಧರ್ಮಾಧಿಕಾರಿಗಳನ್ನೂ ಭೇಟಿ ಮಾಡಿ ನೈತಿಕ ಬೆಂಬಲ ಸೂಚಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…