Featured

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ – vishwanews24

ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪ್ರಮಾಣವಚನ

ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿದ್ದಂತ ಬಿ.ವೈ ವಿಜಯೇಂದ್ರ ಅವರು, ಇಂದು (ನ. 15) ಅಧಿಕೃತವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.

ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ.

ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರಿಗೆ ಖುದ್ದು ಕರೆ ಮಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಜಿಲ್ಲಾಧ್ಯಕ್ಷರು ಸೇರಿ ಹಲವರಿಗೆ ವಿಜಯೇಂದ್ರ ಅವರೇ ಕರೆ ಮಾಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಗೈರಾಗಲಿದ್ದು, ಇನ್ನುಳಿದಂತೆ ಅಸಮಾಧಾನಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎನ್ನುವ ಪ್ರಶ್ನೆ ಎದ್ದಿದ್ದು, ಮುಂದೆ ವಿಜಯೇಂದ್ರ ಇದೆಲ್ಲವನ್ನು ಹೇಗೆ ಸರಿದೂಗಿಸಿಕೊಂಡು ಹೋಗುತ್ತಾರೆ ಎಂಬುವುದು ಕಾದು ನೋಡಬೇಕಿದೆ.

Vishwa News 24

Recent Posts

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

25 minutes ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

46 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

55 minutes ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

1 hour ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

1 hour ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

2 hours ago