ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದೆ. ಕರಾವಳಿ ಭಾಗದಲ್ಲಿ ಜಿದ್ದಿಗೆ ಬಿದ್ದವರಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿ, ಇದೀಗ ಜೆಡಿಎಸ್ ಕೂಡಾ ಕ್ಯಾಂಪೇನ್ ಗೆ ಭರ್ಜರಿ ತಯಾರಿ ಮಾಡಿಕೊಂಡಿದ್ದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಮ್ಮಾನ ಮಾಡಲಿದ್ದಾರೆ.
ರಾತ್ರಿ ೯.೫೦ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…