Featured

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ

ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ ‘ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಅತಿಥಿಗಳಿಗಾಗಿ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಕಾರ್ಯಕ್ರಮದ ಸುಗಮ ಹಾಗೂ ಶಿಸ್ತುಬದ್ಧ ನಿರ್ವಹಣೆಗಾಗಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೋರಲಾಗಿದೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ಇಂದು ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳಿಗಾಗಿ ಅಗತ್ಯ ಮಾರ್ಗಸೂಚಿಗಳು:

1. ಕಾರ್ಯಕ್ರಮಕ್ಕೆ ಪೂರ್ವ ನೋಂದಣಿ ಮಾಡಿಕೊಂಡಿರುವ ಆಹ್ವಾನಿತರಿಗೆ ಮಾತ್ರ ಪ್ರವೇಶ

2. ಪ್ರವೇಶ ದ್ವಾರಗಳನ್ನು ಸಂಜೆ 4:30 ಗಂಟೆಗೆ ಮುಚ್ಚಲಾಗುವುದು. ಸಮಯಕ್ಕಿಂತ ಮುಂಚಿತವಾಗಿ ಆಗಮಿಸಿ.

3. ಕಾರ್ಯಕ್ರಮ ಪ್ರವೇಶಕ್ಕಾಗಿ ಮಾನ್ಯವಾದ ಪ್ರವೇಶ ಪಾಸ್‌ನ್ನು ಕಡ್ಡಾಯವಾಗಿ ಪ್ರದರ್ಶಿಸಿ

4. ಪ್ರವೇಶ ಪಾಸ್‌ಗಳು ವೈಯಕ್ತಿಕ ಬಳಕೆಗೆ ಮಾತ್ರ ಮಾನ್ಯವಾಗಿದ್ದು, ಅವುಗಳನ್ನು ಹಂಚಿಕೆ ಮಾಡುವುದು, ವರ್ಗಾಯಿಸುವುದು,
ವಿನಿಮಯ ಮಾಡಿಕೊಳ್ಳುವುದು ಅಥವಾ ಮರುಮಾರಾಟ ಮಾಡುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

5. ಸುಗಮ ಹಾಗೂ ಸುರಕ್ಷಿತ ವ್ಯವಸ್ಥೆಗಾಗಿ ಎಲ್ಲ ಅತಿಥಿಗಳು ಸಮಯಪಾಲನೆ ಮಾಡುವುದು ಕಡ್ಡಾಯವಾಗಿದೆ.

6. ಕಾರ್ಯಕ್ರಮದ ಅವಧಿಯಲ್ಲಿ ನಾಗರಿಕ ಪ್ರಜ್ಞೆ, ಶಿಸ್ತು ಮತ್ತು ಪರಸ್ಪರ ಗೌರವವನ್ನು ಕಾಪಾಡಿ, ಕಾರ್ಯಕ್ರಮ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಂಪೂರ್ಣ ಸಹಕಾರ ನೀಡಬೇಕು.

7. ಜಗಳ, ಅಸಭ್ಯ ವರ್ತನೆ, ಗದ್ದಲ ಅಥವಾ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

8. ಪ್ರವೇಶ ದ್ವಾರಗಳು, ಬ್ಯಾರಿಕೇಡ್‌ಗಳು ಹಾಗೂ ನಿರ್ಬಂಧಿತ ಪ್ರದೇಶಗಳಿಗೆ ಹಾನಿ ಉಂಟುಮಾಡುವುದು, ಅವುಗಳನ್ನು ದಾಟಲು ಪ್ರಯತ್ನಿಸುವುದು ಅಥವಾ ಅನಧಿಕೃತ ಪ್ರವೇಶ ಪಡೆಯಲು ಯತ್ನಿಸುವುದು ಕಾನೂನು ಕ್ರಮಕ್ಕೆ ಒಳಪಡಬಹುದು.

9. ಕಾರ್ಯಕ್ರಮ ಸ್ಥಳವು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿರುವುದರಿಂದ, ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಸಹಕರಿಸಿ

10. ಸಾಮಾನ್ಯ ಅತಿಥಿಗಳ ವಾಹನ ನಿಲುಗಡೆ ವ್ಯವಸ್ಥೆಯನ್ನು ಸಹ್ಯಾದ್ರಿ ಕಾಲೇಜಿನಲ್ಲಿ ಹಾಗೂ ವಿಶೇಷ ಅತಿಥಿಗಳ ವಾಹನ ನಿಲುಗಡೆ ವ್ಯವಸ್ಥೆಯನ್ನು ಕಾರ್ಯಕ್ರಮ ಸ್ಥಳದ ಸಮೀಪ ಕಲ್ಪಿಸಲಾಗಿದೆ. ದಯವಿಟ್ಟು ನಿಗದಿತ ವಾಹನ ನಿಲುಗಡೆ ಪ್ರದೇಶಗಳನ್ನೇ ಬಳಸಿರಿ.

11. ಭದ್ರತಾ ಸಿಬ್ಬಂದಿ, ಸ್ವಯಂಸೇವಕರು ಹಾಗೂ ಕಾರ್ಯಕ್ರಮ ನಿರ್ವಹಣಾ ತಂಡದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

22 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

23 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago