ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ ‘ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಅತಿಥಿಗಳಿಗಾಗಿ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.
ಕಾರ್ಯಕ್ರಮದ ಸುಗಮ ಹಾಗೂ ಶಿಸ್ತುಬದ್ಧ ನಿರ್ವಹಣೆಗಾಗಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೋರಲಾಗಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಇಂದು ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳಿಗಾಗಿ ಅಗತ್ಯ ಮಾರ್ಗಸೂಚಿಗಳು:
1. ಕಾರ್ಯಕ್ರಮಕ್ಕೆ ಪೂರ್ವ ನೋಂದಣಿ ಮಾಡಿಕೊಂಡಿರುವ ಆಹ್ವಾನಿತರಿಗೆ ಮಾತ್ರ ಪ್ರವೇಶ
2. ಪ್ರವೇಶ ದ್ವಾರಗಳನ್ನು ಸಂಜೆ 4:30 ಗಂಟೆಗೆ ಮುಚ್ಚಲಾಗುವುದು. ಸಮಯಕ್ಕಿಂತ ಮುಂಚಿತವಾಗಿ ಆಗಮಿಸಿ.
3. ಕಾರ್ಯಕ್ರಮ ಪ್ರವೇಶಕ್ಕಾಗಿ ಮಾನ್ಯವಾದ ಪ್ರವೇಶ ಪಾಸ್‌ನ್ನು ಕಡ್ಡಾಯವಾಗಿ ಪ್ರದರ್ಶಿಸಿ
4. ಪ್ರವೇಶ ಪಾಸ್‌ಗಳು ವೈಯಕ್ತಿಕ ಬಳಕೆಗೆ ಮಾತ್ರ ಮಾನ್ಯವಾಗಿದ್ದು, ಅವುಗಳನ್ನು ಹಂಚಿಕೆ ಮಾಡುವುದು, ವರ್ಗಾಯಿಸುವುದು,
ವಿನಿಮಯ ಮಾಡಿಕೊಳ್ಳುವುದು ಅಥವಾ ಮರುಮಾರಾಟ ಮಾಡುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
5. ಸುಗಮ ಹಾಗೂ ಸುರಕ್ಷಿತ ವ್ಯವಸ್ಥೆಗಾಗಿ ಎಲ್ಲ ಅತಿಥಿಗಳು ಸಮಯಪಾಲನೆ ಮಾಡುವುದು ಕಡ್ಡಾಯವಾಗಿದೆ.
6. ಕಾರ್ಯಕ್ರಮದ ಅವಧಿಯಲ್ಲಿ ನಾಗರಿಕ ಪ್ರಜ್ಞೆ, ಶಿಸ್ತು ಮತ್ತು ಪರಸ್ಪರ ಗೌರವವನ್ನು ಕಾಪಾಡಿ, ಕಾರ್ಯಕ್ರಮ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಂಪೂರ್ಣ ಸಹಕಾರ ನೀಡಬೇಕು.
7. ಜಗಳ, ಅಸಭ್ಯ ವರ್ತನೆ, ಗದ್ದಲ ಅಥವಾ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
8. ಪ್ರವೇಶ ದ್ವಾರಗಳು, ಬ್ಯಾರಿಕೇಡ್‌ಗಳು ಹಾಗೂ ನಿರ್ಬಂಧಿತ ಪ್ರದೇಶಗಳಿಗೆ ಹಾನಿ ಉಂಟುಮಾಡುವುದು, ಅವುಗಳನ್ನು ದಾಟಲು ಪ್ರಯತ್ನಿಸುವುದು ಅಥವಾ ಅನಧಿಕೃತ ಪ್ರವೇಶ ಪಡೆಯಲು ಯತ್ನಿಸುವುದು ಕಾನೂನು ಕ್ರಮಕ್ಕೆ ಒಳಪಡಬಹುದು.
9. ಕಾರ್ಯಕ್ರಮ ಸ್ಥಳವು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿರುವುದರಿಂದ, ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಸಹಕರಿಸಿ
10. ಸಾಮಾನ್ಯ ಅತಿಥಿಗಳ ವಾಹನ ನಿಲುಗಡೆ ವ್ಯವಸ್ಥೆಯನ್ನು ಸಹ್ಯಾದ್ರಿ ಕಾಲೇಜಿನಲ್ಲಿ ಹಾಗೂ ವಿಶೇಷ ಅತಿಥಿಗಳ ವಾಹನ ನಿಲುಗಡೆ ವ್ಯವಸ್ಥೆಯನ್ನು ಕಾರ್ಯಕ್ರಮ ಸ್ಥಳದ ಸಮೀಪ ಕಲ್ಪಿಸಲಾಗಿದೆ. ದಯವಿಟ್ಟು ನಿಗದಿತ ವಾಹನ ನಿಲುಗಡೆ ಪ್ರದೇಶಗಳನ್ನೇ ಬಳಸಿರಿ.
11. ಭದ್ರತಾ ಸಿಬ್ಬಂದಿ, ಸ್ವಯಂಸೇವಕರು ಹಾಗೂ ಕಾರ್ಯಕ್ರಮ ನಿರ್ವಹಣಾ ತಂಡದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…