ಇಂದು ಮಧ್ಯಾಹ್ನ 3:00 ಗಂಟೆಗೆ ಎಲ್ಲಾ ಜಿಲ್ಲೆಗಳ ಡಿಸಿ ಜತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ – Vishwanews24

Featured, ರಾಜ್ಯ ನ್ಯೂಸ್

ಇಂದು ಮಧ್ಯಾಹ್ನ 3:00 ಗಂಟೆಗೆ ಎಲ್ಲಾ ಜಿಲ್ಲೆಗಳ ಡಿಸಿ ಜತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು: ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿದಂತ ಭಾರೀ ಮಳೆ , ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ರೈತರು ಬಳೆದಿದ್ದಂತ ಫಸಲು ಹಾಳಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ, ಜನರು ಪರದಾಡುವಂತ ಪರಿಸ್ಥಿತಿ ಎದುರಿಸುವಂತೆ ಆಗಿತ್ತು.

ಕೆಲವೆಡೆ ರಸ್ತೆ ಸಂಪರ್ಕ ಕೂಡ ಕೊಚ್ಚಿ ಹೋಗಿದೆ. ಈ ಹಿನ್ನಲೆಯಲ್ಲಿ ಮಾಹಿತಿ ಪಡೆಯೋ ಸಲುವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು , ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಹಾಗೂ ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಅವಾಂತರ ಕುರಿತು ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ರಾಜ್ಯದಲ್ಲಿನ ಮಳೆ ಅವಾಂತರದ ಬಗ್ಗೆ ಮಾಹಿತಿಯನ್ನು ಪಡೆಯಲಿದ್ದಾರೆ. ಅಲ್ಲದೇ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳೋ ಬಗ್ಗೆ ಸೂಚನೆ ಕೂಡ ನೀಡಲಿದ್ದಾರೆ.

ಉಡುಪಿ : ವಿದ್ಯಾಪೋಷಕ್‌ಗೆ ಅರ್ಜಿ ಆಹ್ವಾನ – Vishwanews24

Leave a Reply