ಮುಂಬೈ: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ವಿಧಾನಸಭಾ ಚುಣಾವಣಾ ಫಲಿತಾಂಶದ ಬಳಿಕ ತಿಂಗಳ ಕಾಲ ನಡೆದ ರಾಜಕೀಯ ಹಗ್ಗಜಗ್ಗಾಟದ ಬಳಿಕ ಶಿವಸೇನಾ ತನ್ನ ನಿಲುವನ್ನು ಸಾಧಿಸಿಕೊಳ್ಳುವ ಸನಿಹಕ್ಕೆ ಬಂದಿದೆ.
ಗುರುವಾರ(ನವೆಂಬರ್ 28) ಸಂಜೆ 6:40ಕ್ಕೆ ಶಿವಾಜಿ ಪಾರ್ಕ್ನಲ್ಲಿ ನಡೆಯುವ ಸಮಾರಂಭದಲ್ಲಿ ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಠಾಕ್ರೆ ಕುಟುಂಬದಲ್ಲಿ ಸಿಎಂ ಸ್ಥಾನ ಅಲಂಕರಿಸಿದ ಮೊದಲಿಗ ಎಂಬ ಹೆಸರಿನ ಜತೆಗೆ ಮನೋಹರ್ ಜೋಶಿ ಮತ್ತು ನಾರಾಯಣ ರಾಣೆ ಬಳಿಕ ಶಿವಸೇನಾ ಪಕ್ಷದಲ್ಲಿ ಸಿಎಂ ಸ್ಥಾನ ಪಡೆದ ಮೂರನೇ ನಾಯಕ ಎಂಬ ಹೆಗ್ಗಳಿಗೆ ಪಾತ್ರರಾಗಲಿದ್ದಾರೆ.
ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ಶಾಸಕರು ‘ಮಹಾ ವಿಕಾಸ ಅಘಾಡಿ’ ಮೈತ್ರಿಕೂಟದ ನಾಯಕನಾಗಿ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಆಯ್ಕೆ ಮಾಡಿದ್ದು, ಉದ್ಧವ್ ಠಾಕ್ರೆ ಶಿವಾಜಿ ಪಾರ್ಕ್ನಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ರಾಜ್ಯಪಾಲರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ದೇಶದ ಗಣ್ಯರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…