Featured

ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ : ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ – Vishwanews24

ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ; ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

ಹುಬ್ಬಳ್ಳಿ: ಇಂದಿನಿಂದ ನಾಲ್ಕು ದಿನಗಳ ಕಾಲ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ 26 ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಮೋದಿಯವರ ಸ್ವಾಗತಕ್ಕೆ ಹುಬ್ಬಳ್ಳಿ ಮಧುವಣಗಿತ್ತಿ ಕಂಗೊಳಿಸುತ್ತಿದೆ.

ಮತ್ತೊಮ್ಮೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ  ಆಗಮಿಸುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಬಿಜೆಪಿ ನಾಯಕರು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ಅಮಿತ್ ಶಾ  ನಡ್ಡಾ, ಗಡ್ಕರಿ ಬಳಿಕ ಈಗ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರ್ತಿದ್ದಾರೆ.

ಸ್ವಾಮಿ ವಿವೇಕಾನಂದರ ಜಯಂತಿನಿಮಿತ್ತ ಧಾರವಾಡದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಗೆಂದು ಆಗಮಿಸಿಸೋ ನಮೋ ಸ್ವಾಗತಕ್ಕೆ ಧಾರವಾಡ ಜಿಲ್ಲೆ ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದಿನಿಂದ 4 ದಿನಗಳ ಕಾಲ ನಡೆಯುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಕಾರ್ಯಕ್ರಮಕ್ಕಾಗಿ ರೈಲ್ವೆ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, 30 ಸಾವಿರ ಜನಕ್ಕೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

ಮೋದಿ ಕಾರ್ಯಕ್ರಮಕ್ಕೂ ಮುನ್ನ ದೇಶದ ಯುವ ಸಾಂಸ್ಕೃತಿಕ ಗತವೈಭವ ಅನಾವರಣಗೊಳಲಿದ್ದು, ವಿವಿಧ ರಾಜ್ಯದ ಜಾನಪದ ಕಲೆ, ಯೋಗಾ, ಮಲ್ಲಗಂಭ ಪ್ರದರ್ಶನ ನಡೆಯಲಿದೆ. 28 ರಾಜ್ಯದ 6 ಕೇಂದ್ರಾಡಳಿತ ಪ್ರದೇಶಗಳ ವಾಕ್‍ಥಾನ್ ನಡೆಯಲಿದೆ. ಬಳಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ಸೇರಿ ಹಲವರು ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 3.40ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಸ್ವಾಗತ ನೀಡಲಿದ್ದಾರೆ. 3.45 ರಿಂದ 4 ಗಂಟೆ ವರೆಗೂ 15 ನಿಮಿಷ ರೋಡ್ ಶೋ ಮಾಡಲಿದ್ದಾರೆ. ಮಾರ್ಗ ಮಧ್ಯೆ ಐದು ಕಡೆ ಮೋದಿ ವಾಹನ ನಿಲ್ಲಿಸೋ ಸಾಧ್ಯತೆ ಇದ್ದು, ವಾಹನ ನಿಲ್ಲಿಸಿ ಜನರತ್ತ ಮೋದಿ ಕೈಬೀಸಲಿದ್ದಾರೆ. ಏರಪೋರ್ಟ್‍ನಿಂದ ಗೋಕುಲ್ ರೋಡ್, ಅಕ್ಷಯಪಾರ್ಕ್, ಹೊಸೂರು ಸರ್ಕಲ್, ದೇಶಪಾಂಡೆ ನಗರ,ಕೋರ್ಟ್ ಸರ್ಕಲ್ ಮೂಲಕ ರೇಲ್ವೆ ಮೈದಾನಕ್ಕೆ ಆಗಮಿಸಲಿದ್ದಾರೆ. 4 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ 5.15 ಕಾರ್ಯಕ್ರಮ ಮುಕ್ತಾಯವಾಗಲಿದೆ.

ಮೋದಿಗೆ ನೀಡಲು ಸಿದ್ಧವಾಗಿದೆ ಉಡುಗೊರೆ: ಹುಬ್ಬಳ್ಳಿಗೆ ಬರುತ್ತಿರುವ ಪ್ರಧಾನಿ ಮೋದಿಗಾಗಿ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಿಸಲಾದ ತಿರಂಗವನ್ನು ಸಹ ಉಡುಗೊರೆಯಾಗಿ ನೀಡಿ ಗೌರವಿಸಲಾಗುತ್ತಿದೆ. ಹಾವೇರಿಯ ಏಲಕ್ಕಿ ಹಾರವನ್ನು ಸಿದ್ಧಪಡಿಸಲಾಗಿದೆ.

ಮೋದಿ ಆಗಮನದಿಂದಾಗಿ ನಗರದ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೋದಿ ಸಾಗುವ ಹಾದಿಯಲ್ಲಿ ಸಾರ್ವಜನಿಕ ಸಂಚಾರ ನಿಷೇಧಿಸಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ಸಂಜೆ 7 ಗಂಟೆಯವರಿಗೆ ನಿರ್ಬಂಧವಿದೆ. ಬೆಳಗ್ಗೆಯಿಂದಲೇ ಹೊರಗಿನಿಂದ ನಗರಕ್ಕೆ ಬರುವ ವಾಹನಗಳಿಗೆ ಆಯಾಯಾ ರಸ್ತೆಗಳ ಪಕ್ಕದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 5.35ಕ್ಕೆ ದೆಹಲಿಯತ್ತ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

20 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

21 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

21 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

22 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

22 hours ago