Featured

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ – vishwanews24

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

ಬೆಳಗಾವಿ/ಬೆಂಗಳೂರು: ಇಂದು (ಡಿ.10) ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ.

ಡಿ.4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿತ್ತು.

ವಿಧೇಯಕದಲ್ಲೇನಿದೆ?

  • ದ್ವೇಷ ಭಾಷಣವು ಗಂಭೀರ ಅಪರಾಧ ಎಂದು ಸುಪ್ರಿಂಕೋರ್ಟ್ ಇತ್ತೀಚೆಗಷ್ಟೇ ವ್ಯಾಖ್ಯಾನಿಸಿತ್ತು.
  • ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವುದು ಅಪರಾಧ
  • ಮೂರು ವರ್ಷಗಳ ಕಾಲ ಶಿಕ್ಷೆಗೆ ಗುರಿಪಡಿಸಲು ಅವಕಾಶ ಅಥವಾ 5 ಸಾವಿರ ರೂಪಾಯಿವರೆಗೆ ದಂಡ
  • ಮೂರು ವರ್ಷ ಶಿಕ್ಷೆ, 5 ಸಾವಿರ ದಂಡ ಎರಡನ್ನೂ ವಿಧಿಸಲು ಅವಕಾಶ
  • ದ್ವೇಷ ಭಾಷಣವನ್ನು ಉತ್ತೇಜಿಸುವಂತೆ ಉದ್ದೇಶಪೂರ್ವಕವಾಗಿ ಪ್ರಕಟಿಸುವವರು, ಪ್ರಚಾರ ಮಾಡುವವರು, ಸಮರ್ಥಿಸುವವರನ್ನ ಶಿಕೆಗೆ ಗುರಿಪಡಿಸಲು ಅವಕಾಶ
  • ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಇದರಲ್ಲಿ ಒಳಗೊಂಡಿದೆ
  • ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಂಗಳು ಸಾಫ್ಟ್ವೇರ್ ಮತ್ತು ಡೇಟಾಬೇಸ್‌ಗಳು ಅಥವಾ ಮೈಕ್ರೋಫಿಲ್ಡ್ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧದ ವ್ಯಾಪ್ತಿಗೆ ಒಳಪಡಿಸುವ ಸಾಧ್ಯತೆ ಇದೆ
  • ದ್ವೇಷ ಭಾಷಣ ಪ್ರಸಾರ ಮಾಡುವ ವಾಹಿನಿಗಳು (ಚಾನೆಲ್‌ಗಳು), ಟೆಲಿಕಾಂ ಸೇವಾ ಪೂರೈಕೆದಾರರು, ನೆಟ್ವರ್ಕ್ ಸೇವಾ ಪೂರೈಕೆದಾರರು, ಇಂಟರ್ನೆಟ್ ಸೇವಾ ಪೂರೈಕೆದಾರರು, ವೆಬ್‌ಹೋಸ್ಟಿಂಗ್ ಸೇವಾ ಪೂರೈಕೆದಾರರು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್ ಇಂಜಿನ್‌ಗಳು ಆನ್‌ಲೈನ್ ಪಾವತಿ ಸೈಟ್‌ಗಳು, ಆನ್‌ಲೈನ್ ಹರಾಜು ಸೈಟ್‌ಗಳು, ಆನ್‌ಲೈನ್-ಮಾರುಕಟ್ಟೆಗಳು ಮತ್ತು ಸೈಬರ್ ಕೆಫೆಗಳನ್ನೂ ಇದರ ವ್ಯಾಪ್ತಿಗೆ ಸೇರಿಸುವ ಸಾಧ್ಯತೆ ಇದೆ
  • ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ ಬಯಲುಸೀಮೆ ತಿದ್ದುಪಡಿ ವಿಧೇಯಕ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಧಾರ್ಮಿಕ ದತ್ತಿ ವಿಧೇಯಕ, ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕ, ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕ, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿತ್ತು
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago