ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ.
ಈಗಾಗಲೇ ಹಾಸನಾಂಬ ದೇವಿ ಸಾರ್ವಜನಿಕ ದರ್ಶನ ಅಂತ್ಯಗೊಂಡಿದ್ದು, ಪೂಜೆಗಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಮಧ್ಯಾಹ್ನ 12 ಗಂಟೆಗೆ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಕಡೆಗಳಿಗೆಯಲ್ಲೂ ಭಕ್ತಗಣ ಹಾಸನಾಂಬ ದೇವಿಯನ್ನು ಕಣ್ತುಂಬಿಕೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಬಾಗಿಲು ಮುಚ್ಚುವ ಮುನ್ನ ಅರ್ಚಕರು ದೀಪ ಹಚ್ಚಿ, ದೇವಿಯ ಮುಂದೆ ಹೂವು, ನೈವೇದ್ಯ ಇಡಲಿದ್ದಾರೆ. ಅನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.
ಅ.9ರಂದು ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲು ತೆರೆಯಲಾಗಿತ್ತು. ಇಲ್ಲಿಯವರೆಗೂ 27 ಲಕ್ಷಕ್ಕಿಂತ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದಾರೆ. 1,000 ರೂ, 300 ರೂ, ಲಾಡು ಪ್ರಸಾದ ಹಾಗೂ ದೇವಿಯ ಸೀರೆ ಮಾರಾಟದಿಂದ 23 ಕೋಟಿಗೂ ಅಧಿಕ ಆದಾಯ ಬಂದಿದ್ದು, ಈ ಬಾರಿಯ ಜಾತ್ರಾ ಮಹೋತ್ಸವ ಇತಿಹಾಸ ಬರೆದಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…