ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ – Vishwanews24
ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ
ನವದೆಹಲಿ : ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಭಾರೀ ಕಸರತ್ತು ನಡೆಸುತ್ತಿರುವ ಬಿಜೆಪಿ ದೆಹಲಿಯಲ್ಲಿ ಸಭೆ ಮೇಲೆ ಸಭೆ ನಡೆಸುತ್ತಿದೆ.
ಎಲ್ಲಾ ಆಯಾಮದಲ್ಲೂ ಪರಿಗಣನೆಗೆ ತೆಗೆದುಕೊಂಡು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು, ಇಂದು ಮತ್ತೊಂದು ಆಂತರಿಕ ಸಭೆ ನಡೆಯಲಿದೆ. ನಂತರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇದಕ್ಕೂ ಮುಂಚೆ ಹೇಳಿಕೆ ನೀಡಿದ್ದ ಸಿಎಂ ಪ್ರತಿಯೊಬ್ಬರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡು ಎಲ್ಲವನ್ನೂ ಅಳೆದು ತೂಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದರು.ಅರುಣಾಚಲಪ್ರದೇಶದಿಂದ ಅಮಿತ್ ಶಾ ದೆಹಲಿಗೆ ಹಿಂದಿರುಗಿದ ಬಳಿಕವೇ ಬಿಜೆಪಿ ಪಟ್ಟಿ ಫೈನಲ್ ಆಗಲಿದೆ ಎನ್ನಲಾಗಿದೆ. ಸಂಜೆ 4 ಗಂಟೆಗೆ ಅರುಣಾಚಲಪ್ರದೇಶದಿಂದ ದೆಹಲಿಗೆ ಅಮಿತ್ ಶಾ ವಾಪಸ್ ಆಗಲಿದ್ದಾರೆ. ಅಮಿತ್ ಶಾ ಜೊತೆ ಸಭೆ ನಡೆಸಿದ ಬಳಿಕ ಪಟ್ಟಿ ಬಿಡುಗಡೆ ಫೈನಲ್ ಆಗಲಿದೆ. ಇಂದು ಅಥವಾ ನಾಳೆ ಬಿಜೆಪಿ ಅಭ್ತರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
