ಚೆನ್ನೈ: ತಮಿಳುನಾಡಿನಲ್ಲಿ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದು, ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತಿದೆ.
ಸೇನಾ ವಿಮಾನದಲ್ಲಿ ರಾವತ್, ಪತ್ನಿ ಮೃತದೇಹ ದೆಹಲಿಗೆ ರವಾನೆಯಾಗಲಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ಕಾಮ್‍ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದ್ದು, ದೆಹಲಿ ಕಂಟೋನ್‍ಮೆಂಟ್‍ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸದ್ಯ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರರವಿದೆ.
ತಮಿಳುನಾಡಿನ ವೆಲ್ಲಿಂಗ್ಟನ್‍ನಲ್ಲಿರುವ ಮಿಲಿಟರಿ ಕಾಲೇಜಿನಲ್ಲಿ ಬುಧವಾರ ಬಿಪಿನ್ ರಾವತ್ ಉಪನ್ಯಾಸ ನೀಡಬೇಕಿತ್ತು. ಹೀಗಾಗಿ ದೆಹಲಿಯಿಂದ ಬೆಳಗ್ಗೆ 9ಕ್ಕೆ ಸೇನಾ ವಿಮಾನದಲ್ಲಿ ಸೂಳೂರಿನತ್ತ 9 ಮಂದಿ ಪ್ರಯಾಣ ಬೆಳೆಸಿದ್ದರು. ಬೆಳಗ್ಗೆ 11:35ಕ್ಕೆ ಸೂಳೂರಿಗೆ ಬಿಪಿನ್ ರಾವತ್ ಅವರಿದ್ದ ಸೇನಾ ವಿಮಾನ ಲ್ಯಾಂಡ್ ಆಗಿದೆ. ಸೂಳೂರಿನಿಂದ ಊಟಿಯ ವೆಲ್ಲಿಂಗ್ಟನ್‍ಗೆ ಸೇನಾ ಹೆಲಿಕಾಪ್ಟರ್‍ನಲ್ಲಿ 14 ಮಂದಿ ಪ್ರಯಾಣ ಬೆಳೆಸಿದ್ದಾರೆ. ಮಧ್ಯಾಹ್ನ 12:22ಕ್ಕೆ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…