ಇಂದು `KRS, ಕಬಿನಿ’ಯಲ್ಲಿ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ -Vishwanews24
ಇಂದು `KRS, ಕಬಿನಿ’ಯಲ್ಲಿ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ -Vishwanews24
ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್ಎಸ್ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೊರೆತಿದೆ.
ಮಧ್ಯಾಹ್ನ 12.05 ರ ಅಭಿಜಿತ್ ಲಗ್ನದಲ್ಲಿ ತುಂಬಿದ ಕೆಆರ್ ಎಸ್ ಜಲಾಶಯಕ್ಕೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಕೆಆರ್ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಲಿದ್ದಾರೆ.
ವಿಶೇಷವೆಂದರೆ ಕಳೆದ ವರ್ಷ ಆಗಸ್ಟ್ 21ರಂದು ಕೆಆರ್ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಕೆಆರ್ಎಸ್ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿದ್ದು, ಮುಖ್ಯಮಂತ್ರಿಗಳು ಆಗಸ್ಟ್ 21 ರಂದೇ ಬಾಗಿನ ಅರ್ಪಿಸಲಿದ್ದಾರೆ.
ಕೆಆರ್ ಎಸ್ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
