Featured

ಇಂದು `KRS, ಕಬಿನಿ’ಯಲ್ಲಿ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ -Vishwanews24

ಇಂದು `KRS, ಕಬಿನಿ’ಯಲ್ಲಿ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ -Vishwanews24

ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೊರೆತಿದೆ.

ಮಧ್ಯಾಹ್ನ 12.05 ರ ಅಭಿಜಿತ್ ಲಗ್ನದಲ್ಲಿ ತುಂಬಿದ ಕೆಆರ್ ಎಸ್ ಜಲಾಶಯಕ್ಕೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಲಿದ್ದಾರೆ.

ವಿಶೇಷವೆಂದರೆ ಕಳೆದ ವರ್ಷ ಆಗಸ್ಟ್ 21ರಂದು ಕೆಆರ್‌ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಕೆಆರ್‌ಎಸ್ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿದ್ದು, ಮುಖ್ಯಮಂತ್ರಿಗಳು ಆಗಸ್ಟ್ 21 ರಂದೇ ಬಾಗಿನ ಅರ್ಪಿಸಲಿದ್ದಾರೆ.

ಕೆಆರ್ ಎಸ್ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

10 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

10 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago