ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ರಾಮನವಮಿಯಂದು ಬೆಳೇಶ್ವರ ಮಹಾದೇವ್ ದೇವಸ್ಥಾನದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿರುವ ಬೆನ್ನಲ್ಲೇ ದೇವಸ್ಥಾನವನ್ನು ಕೆಡವಲು ಐದಕ್ಕೂ ಹೆಚ್ಚು ಬುಲ್ಡೋಜರ್‌ಗಳೊಂದಿಗೆ ಇಂದು ಅಧಿಕಾರಿಗಳು ಆಗಮಿಸಿದ್ದಾರೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಗೌಪ್ಯವಾಗಿ ಕ್ರಮ ಕೈಗೊಂಡ ಮಹಾನಗರ ಪಾಲಿಕೆ ತಂಡ ದೇವಸ್ಥಾನದ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸಿದೆ.
ಇನ್ನು ದೇವಸ್ಥಾನವನ್ನು ಕೆಡಗುವ ವೇಳೆ ಯಾವುದೇ ಅವಘಡ ನಡೆಯದಂತೆ ಪೊಲೀಸ್ ಠಾಣೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಘಟನಾ ಸ್ಥಳದಲ್ಲಿ ಉಪ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.
200 ವರ್ಷಗಳಷ್ಟು ಹಳೆಯದಾದ ಮೆಟ್ಟಿಲುಬಾವಿಯನ್ನು ನಾಲ್ಕು ಕಬ್ಬಿಣದ ಗರ್ಡರ್‌ಗಳು, ಕಾಂಕ್ರೀಟ್‌ನ ತೆಳುವಾದ ಪದರ ಮತ್ತು ಜನಸಮೂಹದ ಭಾರವನ್ನು ತಡೆದುಕೊಳ್ಳಲು ಸಾಧ್ಯವಾಗದ ಹೆಂಚುಗಳಿಂದ ಮುಚ್ಚಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…