Featured

ಇಗೋ ಸಮಸ್ಯೆಯಿಂದ ಬಿಜೆಪಿಗೆ ದೊಡ್ಡ ಹಾನಿಯಾಗುತ್ತಿದೆ : ಡಿವಿ ಸದಾನಂದ ಗೌಡ ವಾಗ್ದಾಳಿ – vishwanews24

ಬಿಜೆಪಿ ಪಕ್ಷದಲ್ಲಿ ಆಗುತ್ತಿರುವ ರಾದ್ದಾಂತವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ..

ನೀವೆಲ್ಲ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಕರೆಸಿಕೊಳ್ಳಲು ನಾಲಾಯಕ್ :  ವಿಜಯೇಂದ್ರ, ಯತ್ನಾಳ್ ವಿರುದ್ದ ಡಿವಿಎಸ್ ಕಿಡಿ

ಬೆಂಗಳೂರು: ಕಾಂಗ್ರೆಸ್‌ನವರು ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಜನರು ಮಾತನಾಡುತ್ತಿದ್ದಾರೆ. ಇಗೋ ಸಮಸ್ಯೆಯಿಂದ ಬಿಜೆಪಿಗೆ ದೊಡ್ಡ ಹಾನಿಯಾಗುತ್ತಿದೆ. ಇಷ್ಟೆಲ್ಲಾ ಪಕ್ಷದಲ್ಲಿ ಆಗುತ್ತಿರುವ ರಾದ್ದಾಂತವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನೊಮ್ಮೆ ನಾನು ದೆಹಲಿಗೆ ಹೋಗುವ ನಿರ್ಧಾರ ಮಾಡಿದ್ದೇನೆ. ಡಿಸೆಂಬರ್ 3 ರಂದು ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಇದರ ಬಗ್ಗೆ ಚರ್ಚಿಸಿ ಇದಕ್ಕೆಲ್ಲ ಬ್ರೇಕ್ ಹಾಕುವಂತೆ ಹೈಕಮಾಂಡ್‌ಗೆ ಒತ್ತಾಯ ಮಾಡುತ್ತೇವೆ ಎಂದು ತಿಳಿಸಿದರು.

ಕರ್ನಾಟಕ ಬಿಜೆಪಿ ಬಗ್ಗೆ ನಾನು ವರಿಷ್ಠರಿಗೆ ಎರಡು ಪತ್ರ ಬರೆದಿದ್ದೇನೆ. ನಾನು ಅಧ್ಯಕ್ಷ ಇದ್ದಾಗಲೂ ಇದಕ್ಕಿಂತ ದೊಡ್ಡ ಗುಂಪುಗಳಿದ್ದವು. ಪಕ್ಷದ ಕಟ್ಟಿದ್ದು ನಾವು ಅಂತ ಅನಂತ್‌ ಕುಮಾರ್ ಹಾಗೂ ಯಡಿಯೂರಪ್ಪ ಗುಂಪು ಪ್ರಬಲವಾಗಿ ಸೆಣಸಾಡುತ್ತಿದ್ದವು. ಆದರೆ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ಗುಂಪು ಯಾವತ್ತೂ ಬೀದಿಗೆ ಇಳಿದಿರಲ್ಲ ಎಂದರು.

ನೀವು ಇಲ್ಲಿ ಬೀದಿಗೆ ಹೋಗುವ ಬದಲು ದೆಹಲಿಗೆ ವಿಮಾನ ಹತ್ತಿ ಹೋಗಿ. ದೆಹಲಿಯಲ್ಲಿ ನಮ್ಮ ಅದ್ಭುತ ನಾಯಕರು ಇದ್ದಾರೆ. ದೆಹಲಿಗೆ ಹೋಗಿ ಪಕ್ಷದ ವಿಚಾರ ಹೇಳಿ ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ನೀವೆಲ್ಲ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಕರೆಸಿಕೊಳ್ಳಲು ನಾಲಾಯಕ್ ಎಂದು ವಿಜಯೇಂದ್ರ, ಯತ್ನಾಳ್ ತಂಡಕ್ಕೆ ಡಿವಿಎಸ್ ಕಿವಿಮಾತು ಹೇಳಿದರು.

ನಾವು ಹಿರಿಯರು ಸೇರಿಕೊಂಡು ಒಂದು ಸಭೆ ಕರೆಯಬೇಕು. ಎರಡೂ ಗುಂಪುಗಳನ್ನು ಕರೆದು ಮಾತಾಡಬೇಕು ಅಂತ ನಮ್ಮ ಮನಸ್ಸಿನಲ್ಲಿತ್ತು. ಆದರೆ ಅವರು ಯಾವಾಗ ಬೀದಿಗೆ ಇಳಿದರೋ ಆಗ ಇದು ನಮ್ಮ ಕೈಯಲ್ಲಿ ಆಗದ ಕೆಲಸ ಅಂತ ಗೊತ್ತಾಯ್ತು. ಬಿಜೆಪಿ ಭಿನ್ನಮತ ರಾಜ್ಯದ ಹಿರಿಯರ ಕೈಮೀರಿ ಹೋಗಿದೆ ಎಂದು ತಿಳಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

6 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

6 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

6 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

10 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

10 hours ago