Featured

ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ – vishwanews24

ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ

ಬೆಂಗಳೂರು: ಐಶ್ವರ್ಯ ಗೌಡ ಕೇಸ್‌ನಲ್ಲಿ ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ತಮ್ಮ ಡಿ.ಕೆ ಸುರೇಶ್  ಸಹಕಾರ ಕೊಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿ.ಕೆ ಸುರೇಶ್‌ ಅವರಿಗೆ ಇಡಿ ನೋಟಿಸ್ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಸಹೋದರ ಇರಲಿಲ್ಲ. ಅಂಟಿಸಿ ಹೋಗ್ತೀನಿ ಅಂತ ಹೇಳಿದ್ರಂತೆ. ಅದಕ್ಕೆ ನಾನು ರಿಸೀವ್ ಮಾಡಿ ಅಂತ ಹೇಳಿದ್ದೇನೆ. ನನ್ನ ಸಹೋದರ ತನ್ನ ಹೆಸರು ಮಿಸ್ ಯೂಸ್ ಆಗಿದೆ ತನಿಖೆ ಮಾಡಿ ಅಂತ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಸಹೋದರ ಹೋಗಿ ಇಡಿಗೆ ಏನು ಬೇಕಾದರೂ ಸಹಕಾರ ಕೊಡ್ತಾರೆ ಎಂದು ಹೇಳಿದ್ದಾರೆ.

ಕಾನೂನು ಬಾಹಿರ ಚಟುವಟಿಕೆ ಮಾಡೋರು, ಮೋಸ ಮಾಡೋರು, 3-4 ಜನ ಮೋಸ ಆಗಿರೋರು ಬಂದು ನಿಮ್ಮ ಹೆಸರು ಮಿಸ್ ಯೂಸ್ ಮಾಡ್ತಿದ್ದಾರೆ ಅಂತ ಹೇಳಿದ್ದಾರೆ. ಅದನ್ನು ತನಿಖೆ ಮಾಡಿ ಅಂತ ನಾವು ಹೇಳಿದ್ದೇವೆ. ಇಡಿಗೆ ಸಹಕಾರ ಕೊಡೋಕೆ ನಾವು ತಯಾರಿದ್ದೇವೆ. ನಾವು ಈ ದೇಶದ ಕಾನೂನಿಗೆ, ವಿಚಾರಣೆಗೆ ಇಂತಹ ಮೋಸ ಮಾಡೋ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸಹಕಾರ ಕೊಡ್ತೀವಿ. ನಾವು ಸಮಾಜಕ್ಕೆ, ಜನರಿಗೆ ನ್ಯಾಯ ಒದಗಿಸಿ ಕೊಡಬೇಕು. ಅದು ನಮ್ಮ ಕರ್ತವ್ಯ. ಅದನ್ನ ಸುರೇಶ್, ಶಿವಕುಮಾರ್ ಮಾಡ್ತಾರೆ. ನಾವು ಇಡಿಗೆ ಎಲ್ಲಾ ಸಹಕಾರ ಕೊಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago