ಚಿಕ್ಕಬಳ್ಳಾಪುರ : “ಮುಂದಿನ ಮೂರುವರೆ ವರ್ಷ ಸಿಎಂ ಆಗಿ ಕಾರ್ಯ ನಿರ್ವಹಿಸಲಿರುವ ಬಿಎಸ್ ಯಡಿಯೂರಪ್ಪ ಅವರು ನಂತರ ಚುನಾವಣೆಗಳಿಂದ ದೂರ ಉಳಿದು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧಾರಿಸಿದ್ದಾರೆಂದು” ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕಾರ್ಯಕಾರಣಿ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ನಾನು ತಿಂಗಳ ಹಿಂದೆ ಬಿಎಸ್ವೈ ಅವರನ್ನು ಭೇಟಿಯಾಗಿದ್ದೆ. ಮೂರುವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ರೈತರ, ದುರ್ಬಲ ವರ್ಗಗಳ ಏಳಿಗೆಗಾಗಿ ಕೆಲಸ ಮಾಡುತ್ತೇನೆ. ಬಳಿಕ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಪಕ್ಷ ಹಾಗೂ ಜನರು ಎಲ್ಲಾ ರೀತಿಯ ಜವಾಬ್ದಾರಿ ಹಾಗೂ ಅಧಿಕಾರ ನೀಡಿದ್ದಾರೆ. ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆ” ಎಂದು ಬಿಎಸ್ವೈ ಖುದ್ದಾಗಿ ನನ್ನ ಬಳಿ ಹೇಳಿರುವುದಾಗಿ ಪ್ರಭಾಕರ್ ಭಟ್ ತಿಳಿಸಿದರು.
“ಮುಂದಿನ ಮೂರುವರೆ ವರ್ಷಗಳ ಕಾಲ ಸಿಎಂ ಬಿಎಸ್ವೈ ಅವರ ನೇತೃತ್ವದಲ್ಲಿ ಸರ್ಕಾರ ನಡೆಯಲಿದೆ. ಸರ್ಕಾರದ ಬಗ್ಗೆ ಯಾವುದೇ ಗೊಂದಲವಿಲ್ಲ. ಯಡಿಯೂರಪ್ಪ ಅವರು ಜನರಿಗಾಗಿ ಏನಾದರೂ ಮಾಡಬೇಕೆಂದುಕೊಂಡಿರುವ ವ್ಯಕ್ತಿ. ಇಡೀ ದೇಶದಲ್ಲಿ ರೈತರ ಬಜೆಟ್ ತಂದವರು ಯಾರಾದರೂ ಇದ್ದರೆ ಅದು ಯಡಿಯೂರಪ್ಪ ಅವರು. ಕಳೆದ 60 ವರ್ಷಗಳಲ್ಲಿ ಯಾರೂ ಮಾಡದ ಕಾರ್ಯವನ್ನು ಯಡಿಯೂರಪ್ಪ ಅವರು ಮಾಡಿದ್ದಾರೆ. ಹಾಗಾಗಿ ಅವರು ರೈತರ ಬಗ್ಗೆ ತಿಳಿದಿರುವ ರಾಜಕಾರಣಿ” ಎಂದು ಹೇಳಿದರು.
“ಕಳೆದ 42 ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿದ ವ್ಯಕ್ತಿ. ಜಾತಿ, ಹಣದ ಆಧಾರದ ಮೇಲೆ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರಕಿದೆ ಎನ್ನುವುದು ತಪ್ಪು. ಸತತವಾಗಿ ಹೋರಾಟ ನಡೆಸಿಕೊಂಡು ಬಂದ ಕಾರಣದಿಂದ ಅವರು ಮುಖ್ಯಮಂತ್ರಿಯಾಗಿದ್ದಾರೆ” ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…