ಬೆಂಗಳೂರು: ಇಡೀ ದೇಶ ನಮ್ಮ ವಿಧಾನಸಭೆ ಕಡೆ ತಿರುಗಿ ನೋಡುವಂತೆ ಸಂವಿಧಾನ ನಿಷ್ಟರಾಗಿ ಕಾರ್ಯ ನಿರ್ವಹಿಸಬೇಕೆಂದು ನೂತನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಸಲಹೆ ನೀಡಿದರು.
ವಿಧಾನಸಭೆಯಲ್ಲಿ ಅವಿರೋಧವಾಗಿ ಸಭಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸಭಾಧ್ಯಕ್ಷರ ಸ್ಥಾನದ ಗೌರವ ಹೆಚ್ಚುವ ರೀತಿಯಲ್ಲಿ ಜನರ ವಿಚಾರಗಳು ಹೆಚ್ಚು ಚೆರ್ಚೆಯಾಗಬೇಕು ಎಂದು ಹೇಳಿದರು.
ಧ್ವನಿ ಇಲ್ಲದವರ ಹಾಗೂ ಜನರ ವಿಚಾರದ ಬಗ್ಗೆ ಹೆಚ್ಚು ಅವಕಾಶ ದೊರೆಯಬೇಕು. ಸಂಸದೀಯ ವೇದಿಕೆಗಳಲ್ಲಿ ರಜೆಯ ವಿಚಾರ ಚರ್ಚೆಯಾಗುವುದಿಲ್ಲ ಎಂಬುದನ್ನು ದೂರ ಮಾಡಬೇಕು.
ಅಂಬೇಡ್ಕರ್ ಅವರು ಸಮಾನತೆ ಆಧಾರದ ಮೇಲೆ ಅಖಂಡ ಭಾರತ ಇರಬೇಕು ಎಂದು ಪ್ರತಿಪಾದಿಸಿದವರು. ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಶಾಸನ ಸಭೆ ಆರಂಭಗೊಂಡಿದ್ದು ಎಂದು ಅದರ ಇತಿಹಾಸವನ್ನು ಮೆಲುಕು ಹಾಕಿದರು.
ಹಣಕಾಸಿನ ವಿಚಾರದಲ್ಲೂ ಕೂಡ ಎಚ್ಚರಿಕೆಯಿಂದ ಇದ್ದವರು. ಪ್ರಾಮಾಣಿಕರಾಗಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ನಿಮ್ಮ ನೋವು ಹಂಚಿಕೊಳ್ಳಲು ನಿಮ್ಮೊಂದಿಗೆ ಇರುವುದಾಗಿ ಹೇಳಿ ರಮೇಶ್‍ಕುಮಾರ್ ನೂತನ ಸ್ಪೀಕರ್ ಅವರನ್ನು ಅಭಿನಂದಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…