ಬೆಂಗಳೂರು : ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದಾರೆ ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರ ಮುಂದುವರೆದಿದ್ದು ಸರ್ಕಾರದ ವಿರುದ್ದ ಮತ್ತೆ ಚಾಟಿ ಬೀಸಿರುವ ಸಿದ್ದರಾಮಯ್ಯ ಅವರು, ”ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ. ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ” ಎಂದು ಹೇಳಿದ್ದಾರೆ.
”ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?” ಎಂದು ಪ್ರಶ್ನಿಸಿರುವ ಅವರು, ”ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ, ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ” ಎಂದು ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…