Featured

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ  – vishwanews24

ಇಡೀ ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ

ಮಂಗಳೂರು: ಕೊರೊನಾ ಪೂರ್ವದಲ್ಲಿದ್ದಂತೆಯೇ ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದ್ದರೂ ಅದರ ಅನುಷ್ಠಾನಕ್ಕೆ ತಾಂತ್ರಿಕ ಸಮಸ್ಯೆಯೊಂದು ಎದುರಾಗಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಮೇಳಗಳಿಗೆ ಕೊರೊನಾ ಪೂರ್ವ ದಲ್ಲಿದ್ದಂತೆಯೇ ಇಡೀ ರಾತ್ರಿ ಪ್ರದರ್ಶ ನಕ್ಕೆ ಅನುಮತಿ ಕೋರಿ ಹೈಕೋರ್ಟ್‌ಗೆ ಕೃಷ್ಣ ಕುಮಾರ್‌ ಅವರು ಅರ್ಜಿ ಹಾಕಿ 15-11-2022ರ ಜಿಲ್ಲಾಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಕೋರಿದ್ದರು. ಇದಕ್ಕೆ ಸಮ್ಮತಿಸಿರುವ ಹೈಕೋರ್ಟ್‌, ಶಬ್ದ ಮಾಲಿನ್ಯ ನಿಯಮಾವಳಿ-2000 ಅನ್ನು ಉಲ್ಲಂಘಿಸಬಾರದು ಎಂದು ಷರತ್ತು ಹಾಕಿದೆ. ಅರ್ಜಿದಾರರು ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಬೇಕು, ಅವರು ಈ ಆದೇಶದಲ್ಲಿನ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬಹುದು ಎಂದಿದೆ.

ಡೆಸಿಬೆಲ್‌ ಸಮಸ್ಯೆ
ಹೈಕೋರ್ಟ್‌ ಸಮ್ಮತಿಸಿದ್ದರೂ ಕಾರ್ಯ ಯೋಗ್ಯವಲ್ಲ ಎಂಬ ಅಭಿಪ್ರಾಯವಿದೆ. ಕಾರಣ ಇಲ್ಲಿ ಮುಖ್ಯ ಸಮಸ್ಯೆ ಡೆಸಿಬಲ್‌(ಡಿಬಿ)ನದ್ದು. ಜನರು ಮಾತನಾಡುವಾಗಿನ ಧ್ವನಿಯೇ 50 ಡಿಬಿ ಇರುತ್ತದೆ. ಚೆಂಡೆಯ ಪೆಟ್ಟು 200 ಡಿಬಿ, ಧ್ವನಿವರ್ಧಕದ ಡಿಬಿ ಕನಿಷ್ಠ 450-500 ರಷ್ಟಿರುತ್ತದೆ. ನಾವು ಈ ವಿಷಯದಲ್ಲಿ ಹಿಂದೆಯೇ ಸೌಂಡ್‌ ಎಂಜಿನಿಯರ್‌ಗಳೊಂದಿಗೆ ಸಮಾಲೋಚಿಸಿದ್ದೇವೆ. ಆದರೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಅನ್ವಯ ರಾತ್ರಿ 10ರಿಂದ ಬೆಳಗ್ಗೆ 6 ರ ವರೆಗೆ 50 ಡೆಸಿಬೆಲ್‌ ಮೀರುವಂತಿಲ್ಲ, ಹಾಗಾಗಿ ಇದು ಕಷ್ಟ ಎನ್ನುತ್ತಾರೆ ಕಟೀಲು ಮೇಳಕ್ಕೆ ಸಂಬಂಧಿಸಿದವರು.

ಜಿಲ್ಲಾಧಿಕಾರಿಯವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಆಟಗಳು ಪರಂಪರೆ, ಸಂಪ್ರದಾಯ ದಂತೆ ನಡೆದುಕೊಂಡು ಬಂದಿರುವ ಸೇವೆ ಎನ್ನುವ ಅಂಶವನ್ನು ಗಮನದಲ್ಲಿರಿಸಿ ರಾತ್ರಿ 12.30ರ ವರೆಗೂ ಕಾಲಮಿತಿಯಲ್ಲಿ ವಿಶೇಷ ಪ್ರಕರಣವೆಂದು ಅನುಮತಿ ನೀಡಿದ್ದಾರೆ. ಈ ಮಧ್ಯೆ ಕಟೀಲು ಮೇಳವು ಕಳೆದ ವರ್ಷದಿಂದ ಕಾಲಮಿತಿ ಪ್ರದರ್ಶನ ಆರಂಭಿಸಿದ್ದು, ಈ ವರ್ಷದ ತಿರುಗಾಟಕ್ಕೂ ಚಾಲನೆ ನೀಡಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

15 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

16 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

16 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago