Featured

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ 15 ದಿನಗಳ ಕಾಲ ಅತಿರುದ್ರ ಮಹಾಯಾಗ – Vishwanews24

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ 15 ದಿನಗಳ ಕಾಲ ಅತಿರುದ್ರ ಮಹಾಯಾಗ

ಉಡುಪಿ: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ನಡೆಯುತ್ತಿದೆ. 15 ದಿನಗಳ ನಿರಂತರ ಕಾರ್ಯಕ್ರಮದಲ್ಲಿ 2 ಲಕ್ಷ ಭಕ್ತರು ಭಾಗಿಯಾಗಲಿದ್ದಾರೆ. ಗಂಗೆಗೆ ನಡೆಯುವ ಮಾದರಿಯ ಆರತಿ ಕೈಲಾಸವಾಸಿ ಶಿವ ನಿಗೆ ಆಗಲಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಉಡುಪಿ ಯಲ್ಲಿ ಅತಿ ರುದ್ರ ಮಹಾಯಾಗ ನಡೆಯುತ್ತಿದೆ. ಮಣಿಪಾಲ ಸಮೀಪದ ಸರಳಬೆಟ್ಟು ಶ್ರೀ ಉಮಾಮಹೇಶ್ವರಿ ದೇವಸ್ಥಾನ  ದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದೆ. ಬರೋಬ್ಬರಿ 15 ದಿನಗಳ ಕಾಲ ನಡೆಯುವ ಅತಿ ರುದ್ರ ಮಹಾಯಾಗದಲ್ಲಿ 150 ಜನ ಋತ್ವಿಜರು ರುದ್ರಪಠಣ, ಯಾಗ- ಹೋಮದಲ್ಲಿ ಭಾಗಿಯಾಗಿದ್ದಾರೆ.

ಶೈವ ಪರಂಪರೆ ಮಾದರಿಯಲ್ಲಿ ಪೂಜೆ ಪುನಸ್ಕಾರ ಹೋಮ ಮಂತ್ರ ಪಠಣ ಯಾಗಗಳು ನಡೆಯುತ್ತಿದೆ. ಪ್ರತಿ ರುದ್ರಪಠಣದ ನಂತರ ಈಶ್ವರ ದೇವರಿಗೆ ಕಲಾ ಸೇವೆ ನಡೆಯುತ್ತಿದೆ. ಸಂಗೀತ ಭರತನಾಟ್ಯ, ಯಕ್ಷಗಾನ ಸೇವೆಯನ್ನು ದೇವರಿಗೆ ಸಮರ್ಪಿಸಲಾಗುತ್ತಿದೆ. ಮುಂಜಾನೆಯಿಂದ ರಾತ್ರಿಯತನಕ ನಿರಂತರ ಅನ್ನದಾನ ಫಲಹಾರಗಳು ಸುಮಾರು 2 ಲಕ್ಷ ಜನಕ್ಕೆ ಏರ್ಪಾಟು ಮಾಡಲಾಗಿದೆ.

ಅತಿ ರುದ್ರ ಮಹಾಯಾಗದ ಮತ್ತೊಂದು ಆಕರ್ಷಣೆ ಶಿವಾರತಿ ಗಂಗಾವತಿಯ ಮಾದರಿಯಲ್ಲೇ ಶಿವಾರತಿಯನ್ನು ದೇವರಿಗೆ ಸಮರ್ಪಣೆ ಮಾಡಲಾಗುತ್ತಿದೆ. ಉಡುಪಿ ನಡೆಯುತ್ತಿರುವ ಅತಿ ರುದ್ರ ಮಹಾಯಾಗಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ದೇಶದ ಕೆಲ ಭಾಗಗಳಿಂದ ಉತ್ತರ ಭಾರತದಿಂದ ಭಕ್ತರು ಬರುತ್ತಿದ್ದಾರೆ. ಶೃಂಗೇರಿ ಸ್ವಾಮೀಜಿಗಳ ನೇತೃತ್ವದಲ್ಲಿ ಅತಿರುದ್ರ ಮಹಾಯಾಗದ ಪೂರ್ಣಾವತಿ ನಡೆಯಲಿದೆ. ಜೀವಿತಾವಧಿಯಲ್ಲಿ ಒಂದು ಬಾರಿಯಾದರೂ ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಬೇಕು ಎಂಬ ನಂಬಿಕೆಯಿದೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

7 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

7 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago