Featured

ಇತಿಹಾಸವನ್ನೇ ಸೃಷ್ಟಿಸಿದೆ ಜನ್ ಧನ್ ಯೋಜನೆ ಖಾತೆದಾರರ ಸಂಖ್ಯೆ ; ಜನಮನ ಗೆದ್ದ ಪ್ರಧಾನಿ ಮೋದಿ..

ಪ್ರಧಾನಿ ಮೋದಿಯವರ ಜನಪ್ರಿಯ ಯೋಜನೆಯಾದ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿ.ಎಮ್.ಜೆ.ಡಿ.ವೈ)ಯು, ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮತ್ತು ಬಡ ಜನರನ್ನು ಮುಖ್ಯ ವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದೆ,  ಮಾತ್ರವಲ್ಲದೇ, ದೇಶದ ಬಡ ಮತ್ತು ಅತಿ ಬಡ ವರ್ಗದವರಿಗೆ ಜನ್ ಧನ್ ಯೋಜನೆ ಮುಖಾಂತರ ಬ್ಯಾಂಕ್ ಖಾತೆ ಹೊಂದಲು ಅವಕಾಶವನ್ನು ಕಲ್ಪಿಸಿದ್ದು, ಸ್ವಾವಲಂಬನಾ ಹೆಸರಿನಲ್ಲಿ ನಿವೃತ್ತಿಯಾದವರಿಗೆ ಸೌಲಭ್ಯ ಮತ್ತು ವಿಮೆ ಸೌಲಭ್ಯ ಕಲ್ಪಿಸಿ ಕೊಡಲಾಗಿರುವ ಜನಪ್ರಿಯ ಯೋಜನೆ ಇದಾಗಿದೆ.

ಆದರೆ ಇದೀಗ  ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಜನ್ ಧನ್ ಯೋಜನೆಯಡಿ ಇದುವರೆಗೆ ಸುಮಾರು 32 ಕೋಟಿ ಬ್ಯಾಂಕ್ ಅಕೌಂಟ್ ಗಳನ್ನು ತೆರೆಯಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.  ಹಿಂದುಳಿದ ಜನರಿಗಾಗಿ ಶೂನ್ಯ ಮೊತ್ತದಲ್ಲಿ ಬ್ಯಾಂಕ್ ಖಾತೆ ತೆರೆಯುವ ಯೋಜನೆ ಇದಾಗಿದ್ದು, ಗ್ರಾಮೀಣ ಭಾಗದಲ್ಲಿ 18 ಕೋಟಿ ಖಾತೆಗಳನ್ನು ತೆರೆಯಲಾಗಿದೆ ಎಂದರೆ, ಅದು ನಿಜಕ್ಕೂ ಕೂಡ ಹೆಮ್ಮೆಯ ವಿಚಾರವೇ ಆಗಿದೆ. ಇನ್ನು ನಗರ ಭಾಗಗಳಲ್ಲಿ 13 ಕೋಟಿ ಜನ್ ಧನ್ ಖಾತೆಗಳನ್ನು ತೆರೆಯಲಾಗಿದ್ದು, ಪ್ರಧಾನಿ ಮೋದಿಯವರ ಈ ಯೋಜನೆಯಲ್ಲಿ ಮಹಿಳೆಯರೇ ಮುಂದಿದ್ದಾರೆ ಎಂದು ತಿಳಿದು ಬಂದಿದೆ.

ಬ್ಯಾಂಕಿಂಗ್ ಕ್ಷೇತ್ರದ ಯಾವುದೇ ಜಂಜಾಟಗಳಿಲ್ಲದೇ 1 ಲಕ್ಷ ರೂಪಾಯಿ ವರೆಗಿನ ವಿಮೆ ಎಲ್ಲರಿಗೂ ಲಭ್ಯವಾಗುತ್ತದಲ್ಲದೇಯಲ್ಲದೇ ರುಪೆ ಕಾರ್ಡ್ ಹೆಸರಿನ ಈ ಸೌಲಭ್ಯ ಕೋಟ್ಯಂತರ ಜನರಿಗೆ ಅನುಕೂಲಕಾರಿಯಾಗಲಿದೆ. ಈ ಯೋಜನೆಯು ಬಡ ವರ್ಗದ ಜನರಿಗೆ ಸರಕಾರದ ವಿವಿಧ ಹಣಕಾಸು ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ನಗರ ಮತ್ತು ಗ್ರಾಮೀಣ ಜನತೆಯನ್ನು ಒಳಗೊಳ್ಳಲಿದ್ದಲ್ಲದೇ ಎಲ್ಲರಿಗೂ ಡೊಮೆಸ್ಟಿಕ್ ಡೆಬಿಟ್ ಕಾರ್ಡ್ (ರುಪೆ ಕಾರ್ಡ್) ನೀಡಲಾಗುವುದು!! ಯಾವುದೇ ಕನಿಷ್ಠ ಮೊತ್ತವಿಲ್ಲದೇ ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ತೆರೆಯಬಹುದಾಗಿದ್ದು, ಖಾತೆ ತೆರೆಯಲು ಯಾವುದೇ ಶುಲ್ಕವೂ ಇರುವುದಿಲ್ಲ. ಇದರೊಂದಿಗೆ, ಪ್ರತಿಯೊಬ್ಬರೂ ಕೂಡ ಉಳಿತಾಯದ ಮಾರ್ಗೋಪಾಯ ಕಂಡುಕೊಳ್ಳಬಹುದಾಗಿದೆ..

ನರೇಂದ್ರ ಮೋದಿ ಕಲ್ಪನೆಯ ಡಿಜಿಟಲ್ ಭಾರತ ಕನಸಿಗೆ ಪೂರಕವಾಗಿ, ದೇಶದಲ್ಲಿ ನಗದು ರಹಿತ ಆರ್ಥಿಕ ವ್ಯವಸ್ಥೆಯ ಅಡಿಪಾಯ ಹಾಕಲಿದೆ. ಹಾಗಾಗಿ ದೇಶದ ಪ್ರತಿಯೊಬ್ಬರಿಗೂ ಎಲ್ಲ ಬಗೆಯ ಬ್ಯಾಂಕಿಂಗ್ ಸೌಲಭ್ಯಗಳನ್ನು ಕಲ್ಪಿಸುವುದೇ ಯೋಜನೆಯ ಮುಖ್ಯ ಮತ್ತು ಮೊದಲ ಗುರಿಯಾಗಿದ್ದು, ಬ್ಯಾಂಕ್ ಖಾತೆಯಿಂದ ಹಿಡಿದು, ವಿಮೆ ಮತ್ತು ಕ್ರೆಡಿಟ್ ಕಾರ್ಡ್ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ದೇಶದ ಬಡ ಮತ್ತು ಅತಿ ಬಡ ವರ್ಗದವರಿಗೆ ಜನಧನ ಯೋಜನೆಯ ಮುಖಾಂತರ ಬ್ಯಾಂಕ್ ಖಾತೆ ಹೊಂದಲು ಅವಕಾಶ ನೀಡಿರುವ ಮೋದಿ ಸರಕಾರವು, ಈ ಯೋಜನೆತಯಿಂದ ಯಶಸ್ಸು ಪಡೆದಿದೆ..

Vishwa News 24

Recent Posts

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

11 seconds ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

46 minutes ago

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

2 hours ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

2 hours ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

2 hours ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

2 hours ago